Breaking News

ಭೂ ಸ್ವಾಧಿನ ಸಮಸ್ಯೆಯಿಂದಾಗಿ ರೈಲ್ವೆ ಹೊಸ ಯೋಜನೆಗಳು ವಿಳಂಬವಾಗುತ್ತಿವೆ: ಸಚಿವ ವಿ.ಸೋಮಣ್ಣ

Spread the love

ಬೆಳಗಾವಿ: ಬೆಳಗಾವಿ&ಧಾರವಾಡ ನಡುವೆ ನೇರ ರೈಲು ಮಾರ್ಗ, ಬಾಗಲಕೋಟೆ&ಕುಡಚಿ, ಲೋಕಾಪುರ&ಯಾದವಾಡ, ಬೆಂಗಳೂರು&ಕೋಲಾರ ಸೇರಿ ಹತ್ತಕ್ಕೂ ಅಧಿಕ ರೈಲ್ವೆ ಹೊಸ ಯೋಜನೆಗಳು ಭೂ ಸ್ವಾಧಿನ ಸಮಸ್ಯೆಯಿಂದಾಗಿ ವಿಳಂಬವಾಗುತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ನಿಗದಿತ ವೇಳೆ ಭೂ ಸ್ವಾಧಿನ ಮಾಡಿ ಹಸ್ತಾಂತರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು ಎಂದರು.
ಕೇಂದ್ರ ಸರ್ಕಾರ 2026&27ನೇ ಬಜೆಟ್​ನಲ್ಲಿ ೂಷಿಸಿದಂತೆ ಬೆಂಗಳೂರು ಕೇಂದ್ರದಿಂದ ತಮಿಳುನಾಡಿ ಚೆನ್ನೆ, ಆಂಧ್ರಪ್ರದೇಶದ ಹೈದರಾಬಾದ್​ ಹಾಗೂ ಮಹಾರಾಷ್ಟ್ರದ ಪುಣೆ ಸೇರಿ ದೇಶದ ವಿವಿಧೆಡೆ ಏಳು ಹೈಸ್ಪೀಡ್​ ರೈಲ್ವೆ ಸೇವೆ ಆರಂಭಗೊಳ್ಳಲಿವೆ. ಇದಕ್ಕಾಗಿ ಪರಿಶೀಲನೆ ನಡೆಯುತ್ತಿದ್ದು, ಶ್ರೀ ಪ್ರಧಾನಮಂತ್ರಿ ನರೇಂದ್ರ ಮೋದಿ ಹೊಸ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದರಿಂದ ರಾಜ್ಯಗಳ ನಡುವಿನ ಸಂಪರ್ಕ ಮತ್ತಷ್ಟು ಗಟ್ಟಿಯಾಗಲಿದೆ. ಜತೆಗೆ ವ್ಯಾಪಾರ ವಹಿವಾಟು, ಉದ್ಯೋಗ ಅವಕಾಶಗಳಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದರು.
ಕೇಂದ್ರ ಆರ್ಥಿಕ ಇಲಾಖೆ ಶಿಫಾರಸು ಹಾಗೂ 16ನೇ ಹಣಕಾಸು ಆಯೋಗದ ಅನ್ವಯ ಕೇಂದ್ರದಿಂದ ಕರ್ನಾಟಕಕ್ಕೆ 63 ಸಾವಿರ ಕೋಟಿ ರೂ. ಅನುದಾನ ಹರಿದು ಬರಲಿದೆ. ಕಳೆದ ವರ್ಷ 55 ಸಾವಿರ ಕೋಟಿ ರೂ. ಅನುದಾನ ರಾಜ್ಯಕ್ಕೆ ನೀಡಿತ್ತು. ರಾಜ್ಯದ ತೆರಿಗೆ ಸಂಗ್ರಹದಲ್ಲಿ ಶೇ.41ರಷ್ಟು ತೆರಿಗೆ ಹಣ ವಾಪಸ್​ ರಾಜ್ಯಕ್ಕೆ ನೀಡುತ್ತಿದೆ ಎಂದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ನಗರ ಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಎಂಎಲ್​ಸಿ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಸಂಜಯ ಪಾಟೀಲ, ಮಾಜಿ ಸಂಸದ ರಮೇಶ ಕತ್ತಿ, ಎಂ.ಬಿ.ಝಿರಲಿ, ಹಣಮಂತ ಕೊಂಗಾಲಿ, ಡಾ.ರವಿ ಪಾಟೀಲ, ಮುರುಘೇಂದ್ರಗೌಡ ಪಾಟೀಲ ಇತರರಿದ್ದರು.
ಮೆಟ್ರೋ ದರ ಹೆಚ್ಚಳ ಕೇಂದ್ರದ ಪಾತ್ರವಿಲ್ಲ
ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಮೆಟ್ರೋ ಆಡಳಿತ ನಡೆಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು, ಹೀಗಾಗಿ ಟಿಕೆಟ್​ ದರ ಹೆಚ್ಚಳ ವಿಚಾರದಲ್ಲಿ ಕೇಂದ್ರಕ್ಕೆ ಸಂಬಂಧಿಸಿದಲ್ಲ. ಟಿಕೆಟ್​ ದರ ಹೆಚ್ಚಳ ಕುರಿತು ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದರು.

Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ