Breaking News

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Spread the love

ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಇಂಡಿ ಕೂಟ ನಿರ್ಧರಿಸಿದೆ.

ವಿಪಕ್ಷ ಸಂಸದರು ಪ್ರಧಾನಿ ಮೋದಿ  ವಿರುದ್ಧ ಅನಿರೀಕ್ಷಿತ ಕೃತ್ಯ ಎಸಗಲು ಸಂಚು ರೂಪಿಸಿದ ಆರೋಪ, ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷದವರಿಗೆ ಮಾತನಾಡಲು ಅವಕಾಶ ಕೊಡ್ತಿಲ್ಲ ಅನ್ನೋದು ಇಂಡಿ  ಕೂಟದ ಆರೋಪವಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಚರ್ಚೆ ನಡೆದಿದೆ. ಇಂಡಿಯಾ ಮೈತ್ರಿಕೂಟದ ಭಾಗವಲ್ಲದ ತೃಣಮೂಲ ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಇದಕ್ಕೆ ಸಮ್ಮತಿಸಿವೆ ಎನ್ನಲಾಗಿದೆ.

ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಕ್ಕೆ 100 ಸಂಸದರ ಸಹಿ ಅಗತ್ಯವಿದೆ. ಇನ್ನು, ವಿಪಕ್ಷದವರು ಸದನದಲ್ಲಿ ಅಡ್ಡಿಪಡಿಸಲು ಯೋಜಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಪೀಕರ್ ಕಲಾಪವನ್ನ ಮಧ್ಯಾಹ್ನದವರೆಗೆ ಮುಂದೂಡಿದ್ದರು. ಕಳೆದ ಒಂದು ವಾರದಿಂದ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಗ್ವಾದಗಳು ನಡೆಯುತ್ತಿದ್ದು, ಸತತ ಪ್ರತಿಭಟನೆಗಳ ನಡುವೆ ಲೋಕಸಭೆಯ ಕಲಾಪಗಳು ಪದೇ ಪದೇ ಮುಂದೂಡಿಕೆಯಾಗಿವೆ.

ಇನ್ನೂ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರ ಮೌನವು ಹೇಡಿತನದ ಕೃತ್ಯವಾಗಿದೆ ಅಂತ ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮೋದಿ ವಿರುದ್ಧ ಪೋಸ್ಟರ್ ವಾರ್ ನಡೆಸಿದ್ದಾರೆ. ಟ್ರಂಪ್‌ಗೆ ಹೆದರಿದ ಮೋದಿ, ಚೀನಾಗೆ ಹೆದರಿದ ಮೋದಿ ಎಂದು ಬರೆದಿದ್ದಾರೆ.

ಇದಕ್ಕೆ ಬಿಜೆಪಿಗರು ತೀವ್ರ ಆಕ್ಷೇಪಿಸಿದ್ದಾರೆ. ಇನ್ನು, ಮೇಖ್ರಿಸರ್ಕಲ್ ಸುತ್ತಮುತ್ತ ಪೋಸ್ಟರ್ ಅಂಟಿಸಿದ್ದ ಪ್ರಕರಣದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ಶೇಷಾದ್ರಿಪುರಂ ಪೊಲೀಸರು ಸುಮೋಟೋ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈ ಮಧ್ಯೆ, ಅಮೆರಿಕದ ಲೈಂಗಿಕ ಅಪರಾಧಿ ಎಪ್‌ಸ್ಟೀನ್ ಫೈಲ್ಸ್‌ನಲ್ಲಿ ಮೋದಿ ಹೆಸರಿದೆ ಹಾಗೂ ಲೋಕಸಭೆಗೆ ಬರದೇ ಪ್ರಧಾನಿ ಫಲಾಯನ ಮಾಡಿದ್ದಾರೆ ಅಂತ ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಮುತ್ತಿಗೆ ಯತ್ನವನ್ನೂ ಮಾಡಿದರು. ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ