Breaking News

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ

Spread the love

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ) ಶ್ರೀ ರಾಘವೇಂದ್ರ ಸ್ವಾಮಿ  ಮಠದ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, 21 ದಿನದಲ್ಲಿ 3.08 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಜನವರಿಯಿಂದ ಫೆಬ್ರವರಿ ತಿಂಗಳು ಸೇರಿ ಒಟ್ಟು 21 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 21 ದಿನದಲ್ಲಿ 3,08, 37,571 ರೂ. ಕಾಣಿಕೆ ಸಂಗ್ರಹವಾಗಿದೆ.

ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಎರಡು ತಿಂಗಳಿನ ಈ 21 ದಿನಗಳಲ್ಲಿ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 2,98,13,571 ರೂ. ಕರೆನ್ಸಿ ನೋಟುಗಳು ಹಾಗೂ 10,24,000 ರೂ. ನಾಣ್ಯಗಳು ಸಂಗ್ರಹವಾಗಿವೆ. 13 ಗ್ರಾಂ ಚಿನ್ನ, 1,018 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ.

ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ