Breaking News

Belagavi: ದಲಿತರಿಗೆ ಶೇ.24ರಷ್ಟು ಅನುದಾನ ಮೀಸಲಿಡಿ

Spread the love

ಬೆಳಗಾವಿ: ಪ್ರಸ್ತುತ ರಾಜ್ಯ ಸರ್ಕಾರ ಮಂಡಿಸಲಿರುವ ರಾಜ್ಯ ಬಜೆಟ್‌ದಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1 ರಷ್ಟು  ಅನುದಾನ ಮೀಸಲಿರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬಜೆಟ್‌ದಲ್ಲಿ ದಲಿತರಿಗೆ ಮೀಸಲಿರಿಸುವ ಅನುದಾನ ದುರ್ಬಳಕೆ ತಡೆಯಬೇಕು, ಎಸ್‌ಎಸ್‌ಪಿ, ಟಿಎಸ್‌ಪಿ ಅನುದಾನವನ್ನು ನಿಯಮಬಾಹಿರವಾಗಿ ಗ್ಯಾರಂಟಿ ಯೋಜನೆಗೆ ವರ್ಗಾಯಿಸಿದ್ದು, 25 ಸಾವಿರ ಕೋಟಿ ರೂ. ಅನುದಾನ ಹಿಂತಿರುಗಿಸಬೇಕು, ಸ್ವಂತ ನಿವೇಶನ ಇಲ್ಲದ ಬಡವರಿಗೆ ನಿವೇಶನ ಖರೀದಿಸಲು 5 ಲಕ್ಷ ರೂ. ಆರ್ಥಿಕ ನೆರವು ನೀಡಬೇಕು. ಬಗರ್ ಹುಕುಂ ಸಾಗುವಳಿದಾರರು ಸಲ್ಲಿಸಿರುವ ಅರ್ಜಿಗಳನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.

ಪ್ರವೀಣ ಮಾದರ, ಪರಶುರಾಮ ವಂಟಮೂರಿ, ಸುಭಾಷ ಹೆಗಡೆ, ಮೈಲಾರಿ ಹೆಗಡೆ, ಲಕ್ಷ್ಮೀ ಶಿಂಗೆ ಇತರರಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ