Breaking News

ಬೆಳಗಾವಿ:ಕೆಡೆಟ್‌ಗಳಿಗೆ ಸೇನೆಯಲ್ಲಿ ವಿಪುಲ ಅವಕಾಶ

Spread the love

ಬೆಳಗಾವಿ: ಎನ್‌ಸಿಸಿಗೆ ಸೇರುವುದರಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು ವೃದ್ಧಿಸುತ್ತದೆ. ‘ಸಿ’ ಸರ್ಟಿಫಿಕೇಟ್ ಪೂರೈಸುವ ಕೆಡೆಟ್‌ಗಳಿಗೆ ಭಾರತೀಯ ಸೇನೆಯಲ್ಲಿ ವಿಪುಲ ಅವಕಾಶಗಳಿವೆ ಎಂದು 26 ಕರ್ನಾಟಕ ಎನ್‌ಸಿಸಿ ಬಟಾಲಿಯನ್ ಕಮಾಡಿಂಗ್ ಆಫೀಸರ್ ಕರ್ನಲ್ ಸುನೀಲ ದಾಗರ ತಿಳಿಸಿದರು.
ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಸಾಧನೆ ಮಾಡಿದ ಧೀರಜ ಭಾವಿಮನೆ ಹಾಗೂ ಸೈನಿಕ ಶಿಬಿರದಲ್ಲಿ ಸಾಧನೆ ಮಾಡಿದ ಓಂಕಾರ ಲೋಗಾವಿ ಅವರನ್ನು ನಗರದ ಲಿಂಗರಾಜ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸತ್ಕರಿಸಿ ಮಾತನಾಡಿದರು.
ಭಾರತೀಯ ಸೇನೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಸಾಕಷ್ಟು ಅವಕಾಶ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಉನ್ನತ ಹುದ್ದೆಗಳಿಗೆ ಹೋಗಲು ಪ್ರಯತ್ನಿಸಬೇಕು. ತಂದೆ-ತಾಯಿ ಕನಸುಗಳನ್ನು ಈಡೇರಿಸಿದರೆ ಅದಕ್ಕಿಂತ ದೊಡ್ಡ ಸಾಧನೆ ಮತ್ತೊಂದಿಲ್ಲ. ಬಟಾಲಿಯನ್ ಕೀರ್ತಿ ಹೆಚ್ಚಿಸಿದ ಕೆಡೆಟ್‌ಗಳು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಶ್ಲಾಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾರ್ಚಾಯ ಡಾ.ಎಚ್.ಎಸ್.ಮೇಲಿನಮನಿ ಮಾತನಾಡಿ, ಕಾಲೇಜು ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿದೆ. ಎನ್‌ಸಿಸಿ, ಎನ್‌ಎಸ್‌ಎಸ್, ಕ್ರೀಡಾ ಘಟಕಗಳು ಹೆಚ್ಚು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಸ್ಪರ್ಧಾತ್ಮಕ ದಿನಗಳಲ್ಲಿ ಹೆಚ್ಚಿನ ಅಧ್ಯಯನದ ಅಗತ್ಯ ಇದೆ ಎಂದರು.
ಎನ್‌ಸಿಸಿ ಅಧಿಕಾರಿ ಮೇಜರ್ ಮಹೇಶ ಗುರನಗೌಡರ ಮಾತನಾಡಿ, ಲಿಂಗರಾಜ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡುತ್ತಿರುವುದರ ಹಿಂದೆ ರಾಜ್ಯಸಭೆ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ ಕೊಡುಗೆ ಅಪಾರವಾಗಿದೆ ಎಂದರು.
ಸುಭೇದಾರ ಮೇಜರ್ ಕಲ್ಲಪ್ಪ ಪಾಟೀಲ, ಪಿಯು ಪ್ರಾಚಾರ್ಯೆ ಗಿರಿಜಾ ಹಿರೇಮಠ,ಡಾ.ಸಿ.ರಾಮರಾವ್, ರವಿ ಬಡಿಗೇರ, ಶಶಿಕಾಂತ ಕೊಣ್ಣೂರ ಇತರರಿದ್ದರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ