Breaking News

ಡಾ.ಪ್ರಭಾಕರ ಕೋರೆ ಅವರನ್ನು ಸನ್ಮಾನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Spread the love

ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವಿಜಯೇಂದ್ರ ಅವರು ಕೆ ಎಲ್ ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರನ್ನು ಸತ್ಕರಿಸಿದರು.

ಭಾರತ ಸರ್ಕಾರದ ಪ್ರತಿಷ್ಠಿತ ನಾಗರಿಕ ಸೇವಾ ಪ್ರಶಸ್ತಿ ಪದ್ಮಶ್ರೀಗೆ ಪುರಸ್ಕೃತರಾದ ಕೋರೆಯವರ ಸೇವೆ ಅಪಾರವಾದದು. ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ನಾಡಿಗೆ ಅದ್ವಿತೀಯ ಕೊಡುಗೆಯನ್ನು ಸಲ್ಲಿಸಿದ್ದಾರೆ. ಸಮಾಜಮುಖಿಯಾಗಿ ಅವರು ನೀಡಿರುವ ಸೇವೆಗೆ ಬೆಲೆಕಟ್ಟಲಾಗದು. ಅವರಿಗೆ ಪದ್ಮಶ್ರೀ ಗೌರವ ಸಂದಿರುವುದು ಹೆಮ್ಮೆಯನ್ನು ತಂದಿದೆ ಎಂದು ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕಮಟಗಿಮಠ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ, ಅನಿಲ ಬೆನಕೆ ಮೊದಲಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ