Breaking News

ಬಜೆಟ್ ಸಭೆ ಬಿಟ್ಟು ನಾಳೆ ಡಿಸಿಎಂ ಡಿಕೆಶಿ ದೆಹಲಿ ಪಯಾಣ!

Spread the love

ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಬೆಳವಣಿಗೆ ಸಂಭವಿಸಿದೆ ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದರೆ, ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಮುಖ ಪೂರ್ವಭಾವಿ ಸಭೆ ಕೈಬಿಟ್ಟು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ನಾಳೆ ನಡೆಯಲಿರುವ ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಮಹತ್ವದ ಬಜೆಟ್ ಪೂರ್ವಭಾವಿ ಸಭೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಗೈರಾಗಲಿದ್ದಾರೆ. ಬೆಳಗ್ಗೆ 9.50ಕ್ಕೆ ಅವರು ದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ನಾಳೆ ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಡಿಸಿಎಂ, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ. ಜೊತೆಗೆ, ಕಾನೂನು ಹೋರಾಟದ ಕುರಿತು ಸುಪ್ರೀಂಕೋರ್ಟ್ ವಕೀಲರೊಂದಿಗೆ ಹಾಗೂ ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ.

ರಾಜ್ಯ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆ ಸಂಘರ್ಷವೇ ಈ ದಿಢೀರ್ ಭೇಟಿಯ ಮೂಲ ಎನ್ನಲಾಗಿದೆ. ಸಿಎಂ ಬದಲಾವಣೆ ಅಥವಾ 2.5 ವರ್ಷದ ಅವಧಿಯ ಸ್ಪಷ್ಟ ಸೂತ್ರಕ್ಕಾಗಿ ಡಿಕೆಶಿ ಹೈಕಮಾಂಡ್ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ. ಬಜೆಟ್ ಸಭೆಗೆ ಗೈರಾಗುವ ಮೂಲಕ ಅವರು ಹೈಕಮಾಂಡ್‌ಗೆ ಪರೋಕ್ಷವಾಗಿ ಅಸಮಾಧಾನದ ಸಂದೇಶ ರವಾನಿಸಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.


Spread the love

About Laxminews 24x7

Check Also

ಪ್ರತಿ ಕಾಲೇಜಿನಲ್ಲಿ ಆ್ಯಂಟಿ ಡ್ರಗ್ಸ್ ಕಮಿಟಿ ರಚನೆಗೆ ಆದೇಶ: ಗೃಹ ಸಚಿವ ಪರಮೇಶ್ವರ್

Spread the loveಬೆಂಗಳೂರು: ಮಾದಕ ವ್ಯಸನ ನಿರ್ಮೂಲನೆಗೆ ಸರ್ಕಾರ ಬದ್ದವಾಗಿದೆ. ಪ್ರತಿ ಕಾಲೇಜಿನಲ್ಲಿ ಆ್ಯಂಟಿ ಡ್ರಗ್ಸ್ ಕಮಿಟಿ ರಚಿಸಬೇಕು ಎಂದು ಆದೇಶಿಸಲಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ