Breaking News

ಜಮಖಂಡಿ ಆಸ್ಪತ್ರೆಗೆ ಡಿಸಿ ಸಂಗಪ್ಪ ದಿಢೀರ್ ಭೇಟಿ: ದೂರು ನೀಡಿದ್ದ ಸಾರ್ವಜನಿಕರ ಸಮ್ಮುಖದಲ್ಲೇ ಅಧಿಕಾರಿಗಳಿಗೆ ತರಾಟೆ!

Spread the love

ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಇಂದು ಜಮಖಂಡಿ ಮತ್ತು ಮುಧೋಳ ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿ ಹಾಗೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ಆಪರೇಷನ್ ನಡೆಸಿದ ಡಿಸಿ, ಕರ್ತವ್ಯ ಲೋಪ ಎಸಗುವ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಮಖಂಡಿ ತಾಲ್ಲೂಕು ಆಸ್ಪತ್ರೆಯಲ್ಲಿ ರೋಗಿಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಮಖಂಡಿ ಎಸಿ ಶ್ವೇತಾ ಬೀಡಿಕರ್ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಂಗಪ್ಪ, ವೈದ್ಯಕೀಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಅಲ್ಲದೆ, ಸಾರ್ವಜನಿಕ ಶೌಚಾಲಯಗಳ ದುಸ್ಥಿತಿ ಕಂಡು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಸ್ವಚ್ಛತೆ ಕಾಪಾಡದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಆಸ್ಪತ್ರೆ ಭೇಟಿಯ ನಂತರ ಜಮಖಂಡಿ ತಹಶೀಲ್ದಾರ್ ಕಚೇರಿ ಹಾಗೂ ಮುಧೋಳದ ಶಾಲೆ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೂ ಡಿಸಿ ಭೇಟಿ ನೀಡಿದರು. ರೈತರು ಮತ್ತು ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ ತುರ್ತಾಗಿ ವಿಲೇವಾರಿ ಮಾಡಬೇಕು ಎಂದು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಡಳಿತ ಯಂತ್ರ ಚುರುಕುಗೊಳಿಸಲು ಸ್ವತಃ ಜಿಲ್ಲಾಧಿಕಾರಿಗಳೇ ಬೀದಿಗೆ ಇಳಿದಿರುವುದು ಜಿಲ್ಲೆಯ ಸಾರ್ವಜನಿಕರಲ್ಲಿ ಸಮಾಧಾನ ಮೂಡಿಸಿದೆ.


Spread the love

About Laxminews 24x7

Check Also

ಬಿಜೆಪಿಗೆ ಆನೆಬಲ, ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆ

Spread the loveಬಾಗಲಕೋಟೆ: ಉಪಚುನಾವಣೆಯಲ್ಲಿ ಬಿಜೆಪಿಗೆ ಆನೆಬಲ ಹೆಚ್ಚುತ್ತಿದ್ದು ರಾಜಕೀಯ ಚಟುವಟಿಕೆಗಳು ಬರದಿಂದ ಸಾಗಿವೆ. ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯವನ್ನು‌ಮೆಚ್ವಿಕೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ