Breaking News

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್​ನಲ್ಲಿ ಕಿಡ್ನಿ ರವಾನೆ

Spread the love

ವಿಜಯಪುರ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ.

ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಬಲರಾಮ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದರೂ, ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದರು.

ಈ ಸಂದರ್ಭದಲ್ಲಿ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದರು. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ತಡರಾತ್ರಿ ವೈದ್ಯರು ಅಂಗಾಂಗಗಳನ್ನು ಪಡೆದುಕೊಂಡಿದ್ದು, ಒಂದು ಕಿಡ್ನಿಯನ್ನು ಝಿರೋ ಟ್ರಾಫಿಕ್​​ನಲ್ಲಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮತ್ತೊಂದು ಕಿಡ್ನಿಯನ್ನು ಬಿಎಲ್ಡಿಇ ಆಸ್ಪತ್ರೆಯಲ್ಲಿರುವ ರೋಗಿಗೆ ಅಳವಡಿಸಲಾಗಿದೆ. ಇತರೆ ಅಂಗಾಂಗಗಳು ಹೊಂದಿಕೆಯಾಗದ ಕಾರಣ ಪಡೆದುಕೊಳ್ಳಲಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ