Breaking News

16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್‌

Spread the love

ಚಾಮರಾಜನಗರ: ಅಪಘಾತ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಹದಿನಾರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿಯನ್ನ ಚಾಮರಾಜನಗರ ಗ್ರಾಮಾಂತರ ಪೊಲೀಸರು  ಬಂಧಿಸಿದ್ದಾರೆ.

ನಂಜನಗೂಡು ಪಟ್ಟಣ ನೀಲಕಂಠ ನಗರದ ಸಫಿ ಬಿನ್ ಸೈಯದ್ ಮಹಮ್ಮದ್ ಎಂಬ ಆಟೋ ಚಾಲಕ  2010 ರಿಂದ ಪೊಲೀಸರ ಕೈಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದನು.

ಸಫಿಗೆ ಅಪಘಾತ ಪ್ರಕರಣವೊಂದರಲ್ಲಿ ಚಾಮರಾಜನಗರ ಜೆಎಂಎಫ್‌ಸಿ ನ್ಯಾಯಾಲಯ 2010 ರಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಅಂದಿನಿಂದಲು ತಲೆ ಮರೆಸಿಕೊಂಡಿದ್ದ ಸಫಿಯನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.


Spread the love

About Laxminews 24x7

Check Also

ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್‌ ಕಳ್ಳರ’ ಜಾಲ; ಇಬ್ಬರು ಅರೆಸ್ಟ್‌

Spread the loveಬೆಂಗಳೂರು: ಡ್ಯೂಪ್ಲಿಕೇಟ್ ಕೀ ಹಾಗೂ ಅತ್ಯಾಧುನಿಕ ಉಪಕರಣಗಳನ್ನ ಬಳಸಿ ದೇಶದ ವಿವಿಧೆಡೆ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿ, ರಾಜಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ