Breaking News

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Spread the love

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ  ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌  ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ ವಂದೇ ಮಾತರಂನ್ನು ಎಲ್ಲಾ ಕಡೆ ಕಡ್ಡಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮೊದಲು ವಂದೇ ಮಾತರಂ, ಬಳಿಕ ರಾಷ್ಟ್ರಗೀತೆ ಹಾಡುವುದು ರಾಷ್ಟ್ರಗೀತೆಗೆ ಅಪಮಾನ ಮಾಡಿದ ಹಾಗೆ. ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಅಪಮಾನ ಮಾಡುತ್ತಿದೆ. ಬಿಜೆಪಿಯವರು ರಾಷ್ಟ್ರಗೀತೆಯ ವಿರುದ್ಧವೇ ಹೋಗ್ತಿದ್ದಾರೆ. ವಂದೇ ಮಾತರಂ ಬೆಂಗಾಲ್ ಪ್ರಾಂತ್ಯದ ರಾಷ್ಟ್ರಗೀತೆ ಆಗಿತ್ತೇ ವಿನಃ ಇಡೀ ದೇಶದ ರಾಷ್ಟ್ರಗೀತೆ ಆಗಿರಲಿಲ್ಲ. ಬೆಂಗಾಲ್ ಚುನಾವಣೆ ಸಲುವಾಗಿ ವಂದೇ ಮಾತರಂ ಕಡ್ಡಾಯ ಮಾಡ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ದೇವರ ಹೆಸರು ಕೂಡ ವಂದೇ ಮಾತರಂನಲ್ಲಿದೆ. ಎಲ್ಲ ಧರ್ಮದವರೂ ಈ ದೇಶದಲ್ಲಿ ಇರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೆಟ್ಟ ಭಾವನೆಗಳನ್ನು ಕೆರಳಿಸಲು, ಕೋಮು ಭಾವನೆ ಕೆರಳಿಸಲು ಇದನ್ನು ತಂದಿದ್ದಾರೆ. ಇದೂ ಕೂಡ ಚುನಾವಣಾ ಗಿಮಿಕ್ ಎಂದು ಕಿಡಿಕಾರಿದ್ದಾರೆ.

ಆರ್‌ಎಸ್‌ಎಸ್‌ (RSS) ದೆವ್ವ ಎಂದ ಸಚಿವ ಪ್ರಿಯಾಂಕ್ ಖರ್ಗೆ  ಹೇಳಿಕೆ ವಿಚಾರವಾಗಿ, ನೋಂದಾವಣೆಯಾಗದ ಸಂಸ್ಥೆ ಅಂತ ಮೋಹನ್ ಭಾಗವತ್ ಅವರೇ ಹೇಳಿದ್ದಾರೆ. ಆ ರೀತಿ ಇದ್ದರೆ ಅದನ್ನ ಗೋಸ್ಟ್ ಸಂಘಟನೆ ಅಂತ ಕರಿತಾರೆ. ನಮ್ಮದು ಸೈದ್ಧಾಂತಿಕ ವಿರೋಧ, ಕಾಲೇಜು ದಿನಗಳಿಂದಲೂ ವಿರೋಧ ಮಾಡ್ತಿದ್ದೇನೆ ಎಂದಿದ್ದಾರೆ.

ಕರಾವಳಿಗೆ ಮಸಿ ಬಳಿದಿದ್ದರೆ ಅದು ಆರ್‌ಎಸ್‌ಎಸ್‌. ಕರಾವಳಿಗೆ ಉದ್ಯಮಿಗಳು ಬರ್ತಿಲ್ಲ ಎಂಬ ಆರೋಪ ಸರಿಯಾಗಿದೆ. ಕೋಮುವಾದ ಇಲ್ಲದಿದ್ದರೆ ವೈಟ್ ಕಾಲರ್ಸ್‌ನವರು ಬರುತ್ತಿದ್ದರು ಎಂದು ಪ್ರಿಯಾಂಕ್‌ ಖರ್ಗೆ ಹೇಳಿಕೆಯನ್ನು ಸಮರ್ಥಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ