Breaking News

ಕೆಲಸ ಮಾಡದ ಸಿಬ್ಬಂದಿಗಳ ವಿರುದ್ಧ ಕ್ರಮ

Spread the love

ಬೆಳಗಾವಿ : ಒಂದಿಬ್ಬರು ಮಾಡುವ ತಪ್ಪಿನಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ತಡೆಗಟ್ಟುವ ಕಾರ್ಯವಾಗಬೇಕಿದ್ದು, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆಯ ಮಾಸಿಕ ಪಥಸಂಚಲನ ಪರಿವೀಕ್ಷಿಸಿ ಮಾತನಾಡಿದ ಅವರು, ಖಾಕಿ ಬಟ್ಟೆಗೆ ತನ್ನದೇ ಆದ ಗೌರವವಿದೆ. ಕಿವಿ ಮತ್ತು ಕಣ್ಣು ಸಕ್ರಿಯವಾಗಬೇಕೆ ಹೊರತು ಕಿವುಡರು ಕುರುಡರಂತೆ ವರ್ತಿಸಬಾರದು. ಅಕ್ರಮಗಳ ವಿರುದ್ದ ಕ್ರಮ ಕೈಗೊಳ್ಳಲೇಬೇಕು. ಕೆಲಸ ಮಾಡದ ಸಿಬ್ಬಂದಿಗಳನ್ನು ಬದಲಾಯಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ನಡೆಯುವ ದೊಡ್ಡ ಜಾತ್ರೆಗಳಲ್ಲಿ ಸೂಕ್ತ ಮಾರ್ಗದರ್ಶನದಲ್ಲಿ ಬಂದೋಬಸ್ತ್ ಮಾಡಬೇಕು. ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ಜಾತ್ರೆಗಳು ಶಾಂತಿ ಸುವ್ಯವಸ್ಥೆಯಿಂದ ನಡೆಸುವುದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ