Breaking News

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Spread the love

ಬೀದರ್: ಮುಖ ತೊಳೆಯಲು ಹೋಗಿ ಕಾಲು ಜಾರಿ ನೀರುಪಾಲಾಗಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆಯೂ ಜಲಸಮಾಧಿಯಾಗಿರುವ ಘಟನೆ ಬೀದರ್‌ನ  ಹಾಲಳ್ಳಿ ಗ್ರಾಮದ ಕಾರಂಜಾ ನದಿಯ ಹಿನ್ನೀರಿನ ಕಾಲುವೆಯಲ್ಲಿ ನಡೆದಿದೆ.

ಮೃತರನ್ನು ಹಳ್ಳೆಖೇಡ್(ಬಿ) ಗ್ರಾಮದ ತಂದೆ ಈಶಪ್ಪ (50) ಮತ್ತು ಮಗ ಅಮರೇಶ (23) ಎಂದು ಗುರುತಿಸಲಾಗಿದೆ.

ತಂದೆ-ಮಗ ಬೀದರ್‌ನಲ್ಲಿ ಸಿಮೆಂಟ್ ಖಾಲಿ ಮಾಡಿ, ವಾಪಸ್ ಹಳ್ಳಿಖೇಡ್‌ಗೆ ಹೋಗುತ್ತಿದ್ದರು. ಈ ವೇಳೆ ಕಾರಂಜಾ ನದಿಯ ಹಿನ್ನೀರಿನ ಕಾಲುವೆಯಲ್ಲಿ ಮಗ ಮುಖ ತೊಳೆಯಲು ಹೋಗಿದ್ದರು. ಆಗ ಆಯತಪ್ಪಿ ಕಾಲು ಜಾರಿ ಕಾಲುವೆಯಲ್ಲಿ ಬಿದ್ದಿದ್ದಾರೆ. ಮಗ ಕಾಲುವೆಯಲ್ಲಿ ಬಿದ್ದಿದ್ದನ್ನು ಕಂಡ ತಂದೆ ವಿಶ್ವನಾಥ ರಕ್ಷಸಿಲು ಮುಂದಾದಾಗ, ಅವರು ಕೂಡ ನೀರುಪಾಲಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಇಬ್ಬರ ಮೃತದೇಹವನ್ನು ಹೊರ ತೆಗೆದಿದ್ದು, ಧನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

24 ವರ್ಷಗಳ ಸುದೀರ್ಘ ದೇಶಸೇವೆ ತವರಿಗೆ ಮರಳಿದ ವೀರ ಯೋಧ

Spread the love24 ವರ್ಷಗಳ ಸುದೀರ್ಘ ದೇಶಸೇವೆ: ತವರಿಗೆ ಮರಳುತ್ತಿರುವ ವೀರ ಯೋಧ ವಿನಾಯಕ ಪಟಗಾರರಿಗೆ ಕುಮಟಾದಲ್ಲಿ ಭವ್ಯ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ