Breaking News

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

Spread the love

ಬೆಂಗಳೂರು: ಕೋಲಾರದ ವೇಮಗಲ್ ಗ್ರಾಮದಲ್ಲಿಂದು ಹಮ್ಮಿಕೊಳ್ಳಲಾಗಿರುವ TASL ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಫ್ರೆಂಚ್ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು.

ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಫ್ರೆಂಚ್ ರಕ್ಷಣಾ ಸಚಿವರಿಗೆ ವಿವಿಧ ಮಿಲಿಟರಿ ಪಡೆಗಳಿಂದ ಗೌರವ ವಂದನೆಯನ್ನು ಸಲ್ಲಿಸಲಾಯಿತು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕೋಲಾರದ ವೇಮಗಲ್ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ TASL ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸಂಜೆ ನವದೆಹಲಿಗೆ ಹಿಂದಿರುಗಲಿದ್ದಾರೆ.


Spread the love

About Laxminews 24x7

Check Also

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Spread the loveನವದೆಹಲಿ: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತ ಸೂಪರ್‌ ಪವರ್‌ ಆಗಬೇಕೆಂಬ ನಿಟ್ಟಿನಲ್ಲಿ ಆಯೋಜನೆಗೊಂಡಿರುವ ಜಾಗತಿಕ ಎಐ ಶೃಂಗಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ