Breaking News

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Spread the love

ನವದೆಹಲಿ: ಕೃತಕ ಜಾಣ್ಮೆ ಮತ್ತು ಡೀಪ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಕರ್ನಾಟಕವು ಪ್ರಭಾವಶಾಲಿಯಾಗಿ ಬೆಳೆಯುತ್ತಿರುವುದನ್ನು ಇಂಡಿಯಾ AI Impact ಶೃಂಗಸಭೆಯಲ್ಲಿ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ  ಅವರು ಜಾಗತಿಕ ದಿಗ್ಗಜರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಜಾಗತಿಕ ಉದ್ಯಮ ದಿಗ್ಗಜರು, ಸಂಶೋಧಕರು ಮತ್ತು ನವೋದ್ಯಮ ಸ್ಥಾಪಕರ ಜೊತೆಗೆ ಸಚಿವರು ವ್ಯಾಪಕ ಸಮಾಲೋಚನೆ ನಡೆಸಿದರು. ಶೃಂಗಸಭೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೃತಕ ಜಾಣ್ಮೆ ಕ್ಷೇತ್ರದಲ್ಲಿ ಪ್ರಗತಿಯ ದಾಪುಗಾಲು ಹಾಕುತ್ತಿರುವ ಕರ್ನಾಟಕವು ಮುಂಚೂಣಿ ಸ್ಥಾನ ಕಾಯ್ದುಕೊಂಡಿದೆ. ಹಾರ್ವೆ ಎಐ ಮತ್ತು ಆಂಥ್ರೊಪಿಕ್‌ನಂತಹ ಈ ವಲಯದ ಜಾಗತಿಕ ದೈತ್ಯ ಕಂಪನಿಗಳು ರಾಜ್ಯದಲ್ಲಿ ಈಗಾಗಲೇ ನೆಲೆವೂರಿವೆ.

ವಾಲ್ಟ್ ಡಿಸ್ನಿ ಕಂಪನಿಯು ಬೆಂಗಳೂರಿನಲ್ಲಿ ತನ್ನ ಎಐ ಜಾಲ ವಿಸ್ತರಿಸುತ್ತಿದೆ. ಎಐ ಪ್ರತಿಭೆಗಳಿಗೆ ಬೆಂಗಳೂರು ಜಾಗತಿಕವಾಗಿ ಅಗ್ರ ಸ್ಥಾನದಲ್ಲಿದೆ. ರಾಜ್ಯ ಸರ್ಕಾರವು 1 ಕೋಟಿ ರೂ.ವರೆಗಿನ ಅನುದಾನದ ಮೂಲಕ ನವೋದ್ಯಮಗಳನ್ನು ಪ್ರೋತ್ಸಾಹಿಸುತ್ತಿದೆ. ಎಐನ ಹೊಣೆಗಾರಿಕೆಯುತ ಬಳಕೆ ಖಚಿತಪಡಿಸಿಕೊಳ್ಳಲು, ಕರ್ನಾಟಕವು ಈ ಕ್ಷೇತ್ರದ ಜಾಗತಿಕ ಮುಖಂಡರು ಮತ್ತು ಸಂಶೋಧಕರ ಜೊತೆಗೆ ನಿಕಟ ಸಂಪರ್ಕದಲ್ಲಿ ಇದೆ ಎಂದು ಹೇಳಿದರು.

ಆಸ್ಪತ್ರೆ ಕಾರ್ಯನಿರ್ವಹಣೆಗೆ ಸುಧಾರಿತ ಎಂಟರ್‌ಪ್ರೈಸ್ ಎಐ ಅನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳಲು ಹೆಚ್ ಕಂಪನಿ ಮತ್ತು ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜ್ ಮತ್ತು ಸೇಂಟ್ ಜಾನ್ಸ್ ಸಂಶೋಧನಾ ಸಂಸ್ಥೆ ನಡುವಣ ಒಪ್ಪಂದಕ್ಕೆ ಸಹಿ ಹಾಕುವುದಕ್ಕೆ ಸಚಿವರು ಸಾಕ್ಷಿಯಾದರು.

ಕರ್ನಾಟಕ ಮತ್ತು ಜಾಗತಿಕ ಉದ್ಯಮಗಳ ನಡುವೆ ತಂತ್ರಜ್ಞಾನ ಸಹಯೋಗ, ಹೂಡಿಕೆ ಪಾಲುದಾರಿಕೆ ಮತ್ತು ನಾವೀನ್ಯತೆ ಆಧಾರಿತ ಬೆಳವಣಿಗೆ ಬಲಪಡಿಸುವ ಕುರಿತ ಚರ್ಚೆಗಳಿಗೆ ವೇದಿಕೆ ಕಲ್ಪಿಸಿದ್ದ ಅಮೆರಿಕ-ಭಾರತ ವಾಣಿಜ್ಯ ಮಂಡಳಿಯು ಆಯೋಜಿಸಿದ್ದ ದುಂಡುಮೇಜಿನ ಸಭೆಯಲ್ಲಿ ಖರ್ಗೆ ಭಾಗವಹಿಸಿದ್ದರು.

ಬೆಂಗಳೂರಿನಲ್ಲಿ ಅಮೆರಿಕದ ಕಂಪನಿಗಳು ತಮ್ಮ ವಹಿವಾಟು ವಿಸ್ತರಿಸಲು ಮತ್ತು ನಾವೀನ್ಯತೆ ಸಾಧಿಸಲು, ಹೆಚ್ಚು ಅನುಕೂಲಕರ ವಾತಾವರಣ ಒದಗಿಸಲು ರಾಜ್ಯ ಸರ್ಕಾರದ ಬದ್ಧತೆಯನ್ನು ಈ ಸಭೆಯಲ್ಲಿ ಪುನರುಚ್ಚರಿಸಲಾಯಿತು ಎಂದು ಖರ್ಗೆ ಹೇಳಿದರು. ಫಿನ್ಲೆಂಡ್ ಹಾಗೂ ಸೈಪ್ರಸ್‌ನ ಉನ್ನತ ನಿಯೋಗವನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. ಕರ್ನಾಟಕ ಪೆವಿಲಿಯನ್ ಮತ್ತು ಆರ್ಟ್ಪಾರ್ಕ್ ಪೆವಿಲಿಯನ್‌ಗಳಿಗೂ ಭೇಟಿ ನೀಡಿದ್ದರು. ವಿವಿಧ ನವೋದ್ಯಮಗಳ ಮುಖ್ಯಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.


Spread the love

About Laxminews 24x7

Check Also

ಚಿಕ್ಕ ವಯಸ್ಸಿನಲ್ಲಿಯೇ ನ್ಯಾಯದೀಶರಾದ ಸುಮಂತ

Spread the loveಚಿಕ್ಕ ವಯಸ್ಸಿನಲ್ಲಿಯೇ ನ್ಯಾಯದೀಶರಾದ ಸುಮಂತ ಶಿರಸಿ ತಾಲೂಕಿನ ಹೆಗಡೆಕಟ್ಟಾ ನಿವಾಸಿಯಾಗಿರುವ ಸುಮಂತ್ ಮಂಜುನಾಥ್ ನಾಯ್ಕ್ (25) ಕಿರಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ