Breaking News

ಸೇತುವೆ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಚಾಲನೆ

Spread the love

ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಗಾಂವ ಹಾಗೂ ಬೆನಕನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಗುರುವಾರ ಭೂಮಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು.
ಸುಮಾರು 30 ಲಕ್ಷ ರೂ,ಗಳ ವೆಚ್ಚದಲ್ಲಿ ಸೇತುವೆ ನಿರ್ಮಾಣಗೊಳ್ಳಲಿದೆ, ಜನರ ಬಹುದಿನದ ಬೇಡಿಕೆಯಾಗಿದ್ದ ಈ ಸೇತುವೆ ನಿರ್ಮಾಣದಿಂದ ಸಂಚಾರ ವ್ಯವಸ್ಥೆ ಸುಗಮವಾಗಲಿದ್ದು, ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಬಾಳು ದೇಸೂರಕರ್, ಎನ್.ಕೆ.ಪಾಟೀಲ, ಮಹೇಶ್ ಕೋಲಕಾರ್, ಬೋಸ್ಲೆ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಜೆಎನ್‌ಎಂಸಿ ಆವರಣದಲ್ಲಿ ತಂಬಾಕು ನಿಯಂತ್ರಣ ಕೋಶದ ‘ಸರ್ಜಿಕಲ್ ಸ್ಟ್ರೈಕ್’: 40 ಪ್ರಕರಣ ದಾಖಲು!

Spread the loveಬೆಳಗಾವಿಯ ಜೆಎನ್‌ಎಂಸಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಜಂಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ