Breaking News

ಬಾಗಲಕೋಟೆಯ ಫಿಶ್‌, ತರಕಾರಿ ಮಾರ್ಕೆಟ್‌ ಮೇಲೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

Spread the love

ಬಾಗಲಕೋಟೆ: ನಿಷೇಧಾಜ್ಞೆಯ ನಡುವೆಯೂ ಬಾಗಲಕೋಟೆಯ  ಕಿಲ್ಲಾ ಓಣಿಯಲ್ಲಿ ಕಲ್ಲು ತೂರಾಟ  ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್‌ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿನ್ನು ಖಂಡಿಸಿ ಇಂದು ಕೊತ್ತಲೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಭೆ ನಡೆಸುತ್ತಿದ್ದರು. ಸಭೆಯಲ್ಲಿ ಕೇವಲ 8 ಮಂದಿಯಲ್ಲ ಬಹಳಷ್ಟು ಮಂದಿ ಕಲ್ಲು ಎಸೆದಿದ್ದಾರೆ. ಆ ಯುವಕರನ್ನು ಬಂಧಿಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು.

ಸಭೆಯಲ್ಲಿ ನಿರ್ಧಾರ ಮಾಡಿದಂತೆ ಹಿಂದೂ ಮುಖಂಡರು ಮತ್ತು ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿಸಲು ಮುಂದಾದರು.

ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ತಡೆದಿದ್ದಕ್ಕೆ ಸಿಟ್ಟಾದ ಕಾರ್ಯಕರ್ತರು ನೀವು ಎಲ್ಲಾ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ನಾವು ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡುತ್ತೇವೆ ಎಂದು ಪಟ್ಟು ಹಿಡಿದರು.

ಪೊಲೀಸರ ಜೊತೆ ವಾಗ್ವಾದ ನಡೆಯುವ ಸಂದರ್ಭದಲ್ಲೇ ಉದ್ರಿಕ್ತರು ಕೆಲ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮೀನು ಮಾರುಕಟ್ಟೆ, ತರಕಾರಿ ಮಾರುಕಟ್ಟೆಯಲ್ಲಿರುವ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಉದ್ರಿಕ್ತರನ್ನ ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

Spread the love

About Laxminews 24x7

Check Also

ರಾಂಪೂರದಲ್ಲಿ ಚರಂತಿಮಠ ಪರ ಬಿಜೆಪಿ-ಜೆಡಿಎಸ್ ಶಕ್ತಿ ಪ್ರದರ್ಶನ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

Spread the loveಬಾಗಲಕೋಟೆ: ಉಪಚುನಾವಣೆ ಹಿನ್ನೆಲೆಯಲ್ಲಿ ರಾಂಪೂರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರ ಪರವಾಗಿ ಬಿಜೆಪಿ ಹಾಗೂ ಜೆಡಿಎಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ