Breaking News

ನಕಲಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟಿ – ನಾಗೇಂದ್ರ ಮನೆ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ

Spread the love

ಬಳ್ಳಾರಿ: ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರ ವಿತರಣೆ ತಡೆಗಟ್ಟಲು ಒತ್ತಾಯಿಸಿ ಬಳ್ಳಾರಿ ಗ್ರಾಮೀಣ ಶಾಸಕ ಬಿ ನಾಗೇಂದ್ರ  ಮನೆ ಮುಂದೆ ವಾಲ್ಮೀಕಿ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಭಾರೀ ಸಂಖ್ಯೆ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಆಗುತ್ತಿವೆ. ಎಸ್‌ಟಿ ಸಮುದಾಯದ ಶಾಸಕರು ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕಾಂಗ ಸಭೆಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರದ ವಿತರಣೆ ಹಾಗೂ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಮುದಾಯದ ಶಾಸಕರು ಧ್ವನಿ ಎತ್ತಬೇಕು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕಾಗಿ ಅನುದಾನ ಕೊಡಬೇಕು. ಎಸ್‌ಟಿ ಸಮುದಾಯದ ಅಭಿವೃದ್ಧಿಗೆ 15,000 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.


Spread the love

About Laxminews 24x7

Check Also

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Spread the loveಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು  ಕೊನೆಗೂ ಪತ್ತೆ ಹಚ್ಚಿದ್ದಾರೆ. ಮೊನ್ನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ