Breaking News

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ

Spread the love

ರಾಯಚೂರು: ಬಾಗಲಕೋಟೆಯಲ್ಲಿ  ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ  ನಡೆದಿದೆ. ನಿಮ್ಮ ಸರ್ಕಾರ ಬಂದಾಗಲೇ ಯಾಕೇ ಹೀಗಾಗುತ್ತೆ ಎಂದು ಕಾಂಗ್ರೆಸ್‌ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.

ರಾಯಚೂರಿನ  ಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದರು. ಈ ವೇಳೆ, ಬಾಂಬ್ ಹಾಕಿದವರನ್ನು ಬ್ರದರ್ಸ್ ಅಂತೀರಿ. ಗಣೇಶನ ವಿಗ್ರಹಕ್ಕೂ ಮಸೀದಿಯಿಂದ ಕಲ್ಲು ಬಿತ್ತು. ಶಿವಾಜಿ ಮೆರವಣಿಗೆಯಲ್ಲೂ ಮಸೀದಿಯಿಂದ ಕಲ್ಲು ಬೀಳುತ್ತೆ. ಕಲ್ಲು ಹೊಡೆದವರನ್ನ ಅರೆಸ್ಟ್ ಮಾಡೊದಿಲ್ಲ. ಅಕ್ರಮ ಮಸೀದಿ ಎಂದವರ ಮೇಲೆ ಕೇಸ್ ಹಾಕಿದ್ರಿ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ರೆ ಹೀಗೆ ಆಗಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪೊಲೀಸರ ಮೇಲೆ ಹಿಡಿತ ಇಟ್ಟುಕೊಂಡಿದೆ. ಕಾಂಗ್ರೆಸ್ ತುಷ್ಟಿಕರಣದಿಂದ ಹೀಗೆ ಆಗುತ್ತಿದೆ. ತುಷ್ಟಿಕರಣ ನೀತಿಯಿಂದ ಇಂತಹ ಘಟನೆಗಳು ನಡೆಯುತ್ತವೆ. ಪೊಲೀಸ್ ಅಧಿಕಾರಿಗಳ ಮೇಲೆ ದಬಾವಣೆ ಮಾಡುತ್ತಿರುವುದಕ್ಕೆ ಇಂತಹ ಘಟನೆ ಆಗುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಶಿವಾಜಿ ಜಯಂತಿ ಸರ್ಕಾರ ಅನೌನ್ಸ್ ಮಾಡಿರುವ ಕಾರ್ಯಕ್ರಮ. ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು. ಆರೋಪಿಗಳನ್ನು ಅರೆಸ್ಟ್ ಮಾಡುವುದಲ್ಲದೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

Spread the loveಬಾಗಲಕೋಟೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಕೇಸ್‌ಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಮಹಿಳೆ ನನ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ