Breaking News

ಬಾಗಲಕೋಟೆಯಲ್ಲಿ ಟ್ರ್ಯಾಕ್ಟರ್​ ಪಲ್ಟಿ ಮಗು ಸೇರಿ ನಾಲ್ವರ ದುರ್ಮರಣ

Spread the love

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

KPCCಗೆ ಸಚಿವ ತಿಮ್ಮಾಪುರ ‘ದೋಖಾ’: ಬಾಗಲಕೋಟೆಯಲ್ಲಿ ‘ಬಾರ್ ಮಾಲೀಕ’ ಕಂ ಪತ್ರಕರ್ತನ ಹಗಲು ದರೋಡೆ!

Spread the loveಬಾಗಲಕೋಟೆ ಉಪಚುನಾವಣೆ ಗೆಲ್ಲಲು ಕೆಪಿಸಿಸಿ ಕಳುಹಿಸಿದ 41 ಲಕ್ಷ ರೂಪಾಯಿ ಮಾಧ್ಯಮ ನಿರ್ವಹಣೆಯ ಹಣ ಈಗ ಅಬಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ