Breaking News

ಫೆ.22 ರಂದು ಬೆಳಗಾವಿಯ ಬಹುತೇಕ ಪ್ರದೇಶದಲ್ಲಿ ಪವರ್ ಕಟ್

Spread the love

ಬೆಳಗಾವಿ; ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಕಣಬರ್ಗಿ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಫೆ.22 ಭಾನುವಾರ ದಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಮುಚ್ಚಂಡಿ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ವಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅದೇ ರೀತಿಯಲ್ಲಿ ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ. ಯದ್ಧಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ, ಗಣಿಕೊಪ್ಪ, ಗುಂಡ್ಯಾನಟ್ಟಿ, ಕೇದನೂರ. ಮನ್ನಿಕೇರಿ, ಹಂದಿಗನೂರ, ಚೆಲುವ್ಯಾನಟ್ಟಿ, ಮಾಳೇನಟ್ಟಿ, ಅತಿವಾಡ, ಬೋಡಕ್ಯಾನಟ್ಟಿ, ಕುರಿಹಾಳ, ಕಟ್ಟಣಭಾವಿ, ನಿಂಗ್ಯಾನಟ್ಟಿ, ಗುರಾಮಟ್ಟ, ಹಳೆಇದ್ದಲಹೊಂಡ, ಶಿವಾಪೂರ, ಪರಶ್ಯಾನಟ್ಟಿ, ದಾಸರವಾಡಿ, ಕೆಂಚ್ಯಾನಟ್ಟಿ, ಸೋನಟ್ಟಿ, ಕಾಕತಿ, ಕಂಗ್ರಾಳಿ ಬಿ.ಕೆ. ಬೈಲೂರ, ಹೆಗ್ಗೇರಿ, ಹುಲ್ಯಾನೂರ, ಬುಡ್ಯಾನೂರ, ಧರನಟ್ಟಿ ಭರನಟ್ಟಿ ಗೌಂಡವಾಡ, ಕಡೋಲಿ, ಅಗಸಗಾ ಹಾಗೂ ಜಾಫರವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಬೆಳಗಾವಿಯ ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ