Breaking News

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

Spread the love

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ರನ್ನು  ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.

ಬೈರತಿ ಬಸವರಾಜ್ ರನ್ನು ಬಂಧಿಸಿ ಏಳು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದ ಸಿಐಡಿ ಪೊಲೀಸರು, ಇಂದು 42ನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ಬೈರತಿ ಬಸವರಾಜ್‌ಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಹಾಗಾಗಿ ಸೋಮವಾರ ಜಾಮೀನು ಅರ್ಜಿ ವಿಚಾರಣೆ ಇದೆ. ಅಲ್ಲಿ ತನಕ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಅಂತಾ ಬೈರತಿ ಬಸವರಾಜ್ ಪರ ವಕೀಲರು ಮನವಿ ಮಾಡಿಕೊಂಡರು.

ಆದರೆ ಸಿಐಡಿ ಪರ ವಕೀಲ ಅಶೋಕ್ ನಾಯಕ್ ವಾದ ಮಂಡಿಸಿ ಜಯದೇವ ಆಸ್ಪತ್ರೆ ಯಲ್ಲಿ ರಿಪೋರ್ಟ್ ನಲ್ಲಿ ಅಂತಹ ಗಂಭೀರ ಸ್ವರೂಪದ ಸಮಸ್ಯೆ ಇಲ್ಲ ಅಂತಾ ಇದೆ. ಹಾಗಾಗಿ ಜೈಲಿಗೆ ಕಳುಹಿಸಿ ಅಲ್ಲೇ ಅಗತ್ಯ ಚಿಕಿತ್ಸೆ ನೀಡಲಿ ಎಂದರು.

ಸದ್ಯ ಇದೇ 26ರ ತನಕ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದು, ಜಯದೇವ ಆಸ್ಪತ್ರೆ ಡಯಟ್‌ನ ಜೈಲಿನಲ್ಲಿ ಮುಂದುವರೆಸಲು ಸೂಚಿಸಿಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಕೈಗಾರಿಕಾ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಬೇಡಿಕೆ ಮುಖ್ಯಮಂತ್ರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಿಂದ ಮನವಿ

Spread the loveಬೆಳಗಾವಿ: ಬೆಳಗಾವಿ ಪ್ರದೇಶದ ಕೈಗಾರಿಕೆ, ಎಂಎಸ್‌ಎಂಇಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ವಿಶೇಷ ನೆರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ