Breaking News

ಬೆಳಗಾವಿ:ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ!

Spread the love

ಬೆಳಗಾವಿ: ಬೆಳಗಾವಿಯಲ್ಲಿ  ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಇದೀಗ ಬಯಲಾಗಿದೆ. ಪ್ರಕರಣ ಸಂಬಂಧ ಬಂಧಿತ ನಕಲಿ ಪತ್ರಕರ್ತರ ಮೊಬೈಲ್‌ಗಳನ್ನು ಪರಿಶೀಲಿಸಿದ ವೇಳೆ 100ಕ್ಕೂ ಹೆಚ್ಚು ಬೆತ್ತಲೆ ಹಾಗೂ ಖಾಸಗಿ ವಿಡಿಯೋಗಳು ಪತ್ತೆಯಾಗಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ.

ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಹಣ ಕೊಡದಿದ್ದರೆ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಬಂಧಿತರಾದ ಸಮೀರ್ ಶೇಖ್, ಅಬ್ದುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಅವರನ್ನು ಪೊಲೀಸರು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಾಳಮಾರುತಿ ಠಾಣೆ ಪೊಲೀಸರು ಮೊಬೈಲ್ ಡೇಟಾ ರೀಟ್ರೀವ್ ಮಾಡುವ ವೇಳೆ ಮತ್ತೊಬ್ಬ ಜಿಲ್ಲಾ ಮಟ್ಟದ ಅಧಿಕಾರಿಯ ಖಾಸಗಿ ವಿಡಿಯೋ ಕೂಡ ಪತ್ತೆಯಾಗಿದೆ. ಆ ಅಧಿಕಾರಿಯ ಮನೆಯಲ್ಲಿ ಕೂಡ ಹಿಡನ್ ಕ್ಯಾಮರಾ ಅಳವಡಿಸಿ ದೃಶ್ಯಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡಿರುವುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಣ ನೀಡದಿದ್ದರೆ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಲಕ್ಷಾಂತರ ರೂ. ವಸೂಲಿ ಮಾಡಿರುವ ಆರೋಪವೂ ಕೇಳಿಬಂದಿದೆ.

ಮೊಬೈಲ್‌ಗಳಲ್ಲಿ ಪತ್ತೆಯಾದ ವಿಡಿಯೋಗಳ ಹಿನ್ನೆಲೆಯಲ್ಲಿ ಆರೋಪಿಗಳನ್ನು ಮತ್ತೆ ಕಸ್ಟಡಿಗೆ ಪಡೆದು ವಿಚಾರಣೆ ತೀವ್ರಗೊಳಿಸಲಾಗಿದೆ. ಗ್ಯಾಂಗ್ ಇನ್ನಷ್ಟು ಅಧಿಕಾರಿಗಳು ಅಥವಾ ಗಣ್ಯರನ್ನು ಟಾರ್ಗೆಟ್ ಮಾಡಿದ್ದಾರೆಯೇ ಎಂಬ ದಿಕ್ಕಿನಲ್ಲಿ ತನಿಖೆ ಮುಂದುವರಿದಿದೆ.

ಈ ಪ್ರಕರಣ ಬೆಳಗಾವಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಅಧಿಕಾರಿಗಳ ಭದ್ರತೆ ಹಾಗೂ ಖಾಸಗಿತನದ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಆರೋಪಿಗಳ ವಿರುದ್ಧ ಐಟಿ ಕಾಯ್ದೆ ಸೇರಿದಂತೆ ವಿವಿಧ ವಿಧಿಗಳಡಿ ಪ್ರಕರಣ ದಾಖಲಿಸಲಾಗಿದ್ದು, ಸಂಪೂರ್ಣ ಜಾಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ