Breaking News

ಜೂನ್ ಒಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ

Spread the love

ಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಕೋಲಾ ತಾಲೂಕಿನ ಮಂಜುಗಣಿಯಲ್ಲಿ ಭಾನುವಾರ ಗಂಗಾವಳಿ -ಮಂಜುಗಣಿ ಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು.

ಗೋಕರ್ಣ ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿಸುವಂತೆ ಬೇಡಿಕೆ ಇದೆ.

ಆದರೆ, ಚುನಾವಣೆ ಸಮೀಪಿಸಿದ್ದು, ಜನಗಣತಿ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೊಸದಾಗಿ ಪಟ್ಟಣ ಪಂಚಾಯಿತಿ ರಚನೆ ಸಾಧ್ಯವಿಲ್ಲ. ಚುನಾವಣೆ ಮುಗಿದ ನಂತರ ಗೋಕರ್ಣ ಪಟ್ಟಣ ಪಂಚಾಯಿತಿ ರಚನೆ ಮಾಡುವುದಾಗಿ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ ರೂಪಿಸಲಾಗುತ್ತಿದ್ದು, ಕರ್ನಾಟಕದತ್ತ ಪ್ರವಾಸಿಗರನ್ನು ಸೆಳೆಯುವ ಯೋಜನೆ ಕಾರ್ಯಗತಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಸಚಿವ ಮಂಕಾಳ ವೈದ್ಯ, ಶಾಸಕರಾದ ಆರ್.ವಿ. ದೇಶಪಾಂಡೆ, ಸತೀಶ್ ಸೈಲ್, ದಿನಕರ ಶೆಟ್ಟಿ, ಭೀಮಣ್ಣ ನಾಯ್ಕ ಮತ್ತಿತರರು ಇದ್ದರು.


Spread the love

About Laxminews 24x7

Check Also

ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Spread the loveಕಾರವಾರ: ಕಾಡು ಪ್ರಾಣಿಗಳ ಹತ್ಯೆ ಶಂಕೆಯ ಮೇರೆಗೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭಟ್ಕಳ (Bhatkal) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ