Breaking News

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Spread the love

ಬಾಗಲಕೋಟೆ: ಕಲ್ಲು ತೂರಾಟದಲ್ಲಿ ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರಾಗಿದ್ದು ಅವರನ್ನು ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಮುಸ್ಲಿಮ್‌ ಮುಖಂಡರು ಮನವಿ ಮಾಡಿದ್ದಾರೆ.

ಶುಕ್ರವಾರ ನಡೆದ ಶಾಂತಿ ಸಭೆಗೆ ಮುಸ್ಲಿಮರು ಗೈರಾಗಿದ್ದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತ ನವನಗರದ ಜಿಲ್ಲಾಡಳಿತ ಭವನದಲ್ಲಿ ಉಸ್ತುವಾರಿ ಸಚಿವ ತಿಮ್ಮಾಪೂರ ನೇತೃತ್ವದಲ್ಲಿ ಮತ್ತೆ ಶಾಂತಿ ಸಭೆಯನ್ನು ಆಯೋಜಿಸಿತ್ತು. ಆದರೆ ಇಂದಿನ ಸಭೆಗೆ ಹಿಂದೂ ಮುಖಂಡರು ಹಾಜರಾಗಿರಲಿಲ್ಲ.

ಈ ಸಭೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮಾತ್ರ ಭಾಗಿಯಾಗಿ ತಮ್ಮ ಅಹವಾಲುಗಳನ್ನ ಮೌಖಿಕವಾಗಿ ಸಚಿವರಿಗೆ ಸಲ್ಲಿಸಿದರು. ಕಲ್ಲು ತೂರಾಟದಲ್ಲಿ ಬಂಧಿತ 8 ಜನರ ಪೈಕಿ ಓರ್ವ ಮಾತ್ರ ಆರೋಪಿ ಇದ್ದಾನೆ. ಉಳಿದ 7 ಜನ ಅಮಾಯಕರಿದ್ದು ಬಿಡುಗಡೆ ಮಾಡುವಂತೆ ಮುಸ್ಲಿಂ ಮುಖಂಡರ ಮನವಿ ಮಾಡಿದರು.

ಸಭೆಯ ಬಳಿಕ ಆರ್.ಬಿ.ತಿಮ್ಮಾಪೂರ ಮಾತನಾಡಿ, ಜಿಲ್ಲೆಯ ಎಲ್ಲಾ ಸಮುದಾಯದ ಜನರು ಶಾಂತಿ ಸಂಯಮದಿಂದ ಇರಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡದಂತೆ ಮುನ್ನಡೆಯಬೇಕೆಂದು ಕೋರಿಕೊಂಡರು.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ