Breaking News

ಗಾಂಧಿ ಪಾಕಿಸ್ತಾನದ ಪಿತಾಮಹ, ಓಮರ್ ಅಬ್ದುಲ್ಲಾ, ರಾಹುಲ್ ಗಾಂಧಿ ಒಂದೇ ಪ್ರೊಡಕ್ಷನ್ : ಯತ್ನಾಳ್ ವಿವಾದದ ಹೇಳಿಕೆ ವೈರಲ್!

Spread the love

ಯಾದಗಿರಿ : ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನದ ರಾಷ್ಟ್ರಪಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ವೈರಲಾಗಿದೆ. ಶಿವಾಜಿ ಜಯಂತಿಯಲ್ಲಿ ಶಾಸಕ ಬಸನಗೌಡ ಪಾಟೀಲ ಭಾಷಣದ ವಿಡಿಯೋ ಈಗ ವೈರಲ್ ಆಗಿದೆ. ಫೆಬ್ರುವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳಲ್ಲ. ಜವಾಹರ್ಲಾಲ್ ನೆಹರೂರನ್ನ ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಕಾಶ್ಮೀರಕ್ಕೆ 370 ಕೊಟ್ಟಿದ್ದು ಯಾಕಂದ್ರೆ ಫಾರೂಕ್ ಅಬ್ದುಲ್ಲ ಲಿಂಕ್ ಇದೆ, ಫಾರೂಕ್ ಅಬ್ದುಲ್ಲಗೆ ಜವಾಹರಲಾಲ್ ನೆಹರುಗೆ ಲಿಂಕ್ ಇತ್ತು. ಅದಕ್ಕೆ ರಾಹುಲ್ ಗಾಂಧಿ ಮತ್ತು ಓಮರ್ ಅಬ್ದುಲ್ಲ ಒಂದೇ ತರಹ ಇದ್ದಾರೆ. ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ರಾಹುಲ್ ಸೇಮ್ ಇದ್ದಾರೆ ಇಬ್ಬರೂ ಒಂದೇ ಪ್ರೋಡಕ್ಷನ್ ಇದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜವಾಹರ್ ಲಾಲ್ ನೆಹರು ಈ ಕೆಲಸ ಬಿಟ್ಟು ಬೇರೆ ಏನು ಮಾಡಿಲ್ಲ. ಮೌಂಟ್ ಬ್ಯಾಟನ್ ಪತ್ನಿ ಜೊತೆ ಸೇರಿ ಇದೇ ಕೆಲಸ ಮಾಡಿದ್ದಾನೆ. ಇವರೆಲ್ಲರೂ ದೇಶದ ಸ್ವತಂತ್ರಕ್ಕಾಗಿ ಉಪವಾಸ ಮಾಡುತ್ತಿರಲಿಲ್ಲ. ಕೊಲ್ಕತ್ತಾದಿಂದ 555 ಸಿಗರೇಟ್ ತರಿಸಿಕೊಂಡು ಸೇದುತ್ತಿದ್ದರು. ಗಾಂಧೀ ಚರಕ ತಿರುಗಿಸಿದ್ದರಿಂದ ಭಾರತಕ್ಕೆ ಸ್ವತಂತ್ರ ಸಿಕ್ಕಿತ? ನಾನು ಚರಕ ತಿರುಗಿಸುತ್ತೇನೆ ನಾಳೆ ರಾಜ್ಯದ ಸಿಎಂ ಆಗುತ್ತೇನ? ಭಾರತದಲ್ಲಿರುವ ಮುಸ್ಲಿಮರು ಒಂದೇ ಮಾತರಂ ಹೇಳಬೇಕು. ಇಲ್ಲದಿದ್ದರೆ ಗಾಂಧೀ ಕೊಟ್ಟ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದೆ.


Spread the love

About Laxminews 24x7

Check Also

ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

Spread the loveಯಾದಗಿರಿ, ಮಾರ್ಚ್​ 05: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ