Breaking News

ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ

Spread the love

ಧಾರವಾಡ: ಖಾಲಿ ಇರುವ 2.84 ಲಕ್ಷ ಸರ್ಕಾರಿ  ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಇಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಶಿಕ್ಷಣ, ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಂತೆ ಅಭ್ಯರ್ಥಿಗಳು ಆಗ್ರಹಿಸಿದರು.

ಉದ್ಯೋಗ ಬೇಕು ಎಂದು ಭಿತ್ತಿಪತ್ರ ಹಿಡಿದು ಸಾವಿರಾರು ಯವಕರು ಆಗಮಿಸಿದರು. ಈ ವೇಳೆ ಪೊಲೀಸರು-ಪ್ರತಿಭಟನಾಕಾರರ ಮಧ್ಯೆ ತಳ್ಳಾಟ-ನೂಕಾಟ ನಡೆಯಿತು. ಪ್ರತಿಭಟನೆಗೆ ಅನುಮತಿ ನಿಡಲು ಪೊಲೀಸ್ (Police) ಇಲಾಖೆಯಿಂದ ಕಿರಿಕಿರಿಯಾಗಿತ್ತು. ಎರಡನೇ ಬಾರಿಯ ಬೃಹತ್ ಪ್ರತಿಭಟನೆಗೆ ಪೊಲೀಸರು ಅಡ್ಡಿಯಾಗುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಇದೇ ವಿಚಾರವಾಗಿ ಉದ್ಯೋಗಾಕಾಂಕ್ಷಿಗಳು ಮತ್ತು ಪೊಲೀಸರ ನಡುವೆ ದೊಡ್ಡ ಮಾತಿನ ಚಕಮಕಿ ನಡೆಯಿತು.

ಉದ್ಯೋಗ ಬೇಕು ಎಂಬ ಭಿತ್ತಿಪತ್ರ ಹಿಡಿದು ಬಂದ ಯುವಕರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಭಾವಚಿತ್ರವನ್ನು ಸುಟ್ಟು ಹಾಕಿ ಸಿಟ್ಟು ಹೊರಹಾಕಿದರು. ಸರ್ಕಾರ ರಚನೆಯಾದರೆ ಸರ್ಕಾರಿ ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಸರ್ಕಾರ ರಚನೆಯಾಗಿ ಎರಡೂವರೆ ವರ್ಷವಾದರೂ ಇನ್ನು ನೇಮಕ ಪ್ರಕ್ರಿಯೆ ನಡೆಸಿಲ್ಲ ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

ವಿದ್ಯಾರ್ಥಿಗಳ ಪ್ರತಿಭಟನೆಗೆ ಬಿಜೆಪಿ ನಾಯಕರು ಸಾಥ್ ನೀಡಿದರು. ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಸರ್ಕಾರ ಈಗ ತನ್ನ ನೌಕರರಿಗೆ ಸರಿಯಾಗಿ ಸಂಬಳ ನೀಡುತ್ತಿಲ್ಲ. ಈಗ ನೇಮಕಾತಿ ಮಾಡದೇ ಆಕಾಂಕ್ಷಿಗಳಿಗೆ ವಂಚಿಸುತ್ತಿದೆ. ಈ ಸರ್ಕಾರ ದಿವಾಳಿಯಾಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದರು.

Spread the love

About Laxminews 24x7

Check Also

ಯೋಗೇಶ್ ಗೌಡ ಹತ್ಯೆ ಕೇಸ್ – ಏ.9ಕ್ಕೆ ತೀರ್ಪು ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

Spread the love ಧಾರವಾಡ: ಜಿಲ್ಲಾ ಪಂಚಾಯಿತಿ ಮಾಜಿ ಜಿಲ್ಲಾ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ