Breaking News

ಬಾಕಿ ಬಿಲ್​​ಗೆ ಆಗ್ರಹಿಸಿ ಮಾ.6ರಂದು ಗುತ್ತಿಗೆದಾರರ ಪ್ರತಿಭಟನೆಗೆ ಕರೆ

Spread the love

ತುಮಕೂರು: ಬಾಕಿ ಬಿಲ್​​ ವಿಚಾರವಾಗಿ ರಾಜ್ಯ ಸರ್ಕಾರ ದ ವಿರುದ್ಧ ಸಮರ ಸಾರಿರುವ ಗುತ್ತಿಗೆದಾರರ ಸಂಘ, ಮಾ. 6ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಸುಮಾರು 37 ಸಾವಿರ ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.

ಈ ಸರ್ಕಾರದ ಕೆಲವು ಇಲಾಖೆಗಳಲ್ಲಿ ಪ್ಯಾಕೇಜ್ ಸಿಸ್ಟಮ್ ಅವ್ಯಾಹತವಾಗಿ ನಡೆಯುತ್ತಿದ್ದು, ಗುತ್ತಿಗೆದಾರರ ಸಮಸ್ಯೆಗಳನ್ನು ಪರಿಹರಿಸುವಂತೆ ಹಲವಾರು ಬಾರಿ ಮನವಿ ಕೊಟ್ಟರೂ ಸರ್ಕಾರ ಸ್ಪಂದಿಸುತ್ತಿಲ್ಲ. ಸೌಜನ್ಯಕ್ಕೂ ನಮ್ಮನ್ನು ಕರೆದು ಮಾತನಾಡುವ ಕೆಲಸ ಆಗಿಲ್ಲ. ನಮಗೆ ಜಿಎಸ್‌ಟಿ ಸೇರಿದಂತೆ ಮತ್ತಿತರ ಸಮಸ್ಯೆಗಳಿದ್ದು, ಮುಖ್ಯಮಂತ್ರಿಗಳ ಜೊತೆ ಮಾತನಾಡಿದರೂ ಯಾವುದೇ ಸಮಸ್ಯೆ ಬಗೆಹರಿಯುತ್ತಿಲ್ಲ. ಹೀಗಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿರೋದಾಗಿ ಸಂಘ ತಿಳಿಸಿದೆ. ಸುಮಾರು 15 ಸಾವಿರ ಜನ ಸೇರಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸೋದಾಗಿ ಮಾಹಿತಿ ನೀಡಿದೆ.

ಯಾವ್ಯಾವ ಇಲಾಖೆಯಲ್ಲಿ ಎಷ್ಟು ಹಣ ಬಾಕಿ?

  • ಲೋಕೋಪಯೋಗಿ ಇಲಾಖೆ (PWD) – 8,370.76 ಕೋಟಿ ರೂ.
  • ಬೃಹತ್ ನೀರಾವರಿ ಇಲಾಖೆ – 13,000 ಕೋಟಿ ರೂ.
  • ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ – 3,800 ಕೋಟಿ ರೂ.
  • ಸಣ್ಣ ನೀರಾವರಿ ಇಲಾಖೆ – 3,000 ಕೋಟಿ ರೂ.
  • ನಗರಾಭಿವೃದ್ಧಿ ಇಲಾಖೆ – 2,000 ಕೋಟಿ ರೂ.
  • ವಸತಿ ಇಲಾಖೆ – 2,600 ಕೋಟಿ ರೂ.
  • ಕಾಮಗಾರಿ ಇಲಾಖೆ – 2,000 ಕೋಟಿ ರೂ.
  • ಜಿಬಿಎ – 2,600 ಕೋಟಿ ರೂ.

ಮೇಲಿನ ಎಲ್ಲಾ ಇಲಾಖೆಗಳು ಸೇರಿ ಗುತ್ತಿಗೆದಾರರಿಗೆ ಬಾಕಿ ಬಿಲ್​​ ಮೊತ್ತ ಒಟ್ಟು 37,370.76 ಕೋಟಿ ರೂಪಾಯಿಗಳಿವೆ. ಇದರಿಂದ ಗುತ್ತಿಗೆದಾರರು ವಿಷ ಕುಡಿಯಬೇಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸುಮಾರು 16 ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೂರಾರು ಜನ ಗುತ್ತಿಗೆದಾರರು ಮನೆ-ಮಠ ಬಿಟ್ಟುಹೋಗಿದ್ದಾರೆ. ಹೀಗಾಗಿ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಮುಷ್ಕರ ಮಾಡುತ್ತಿದ್ದೇವೆ. ಒಂದು ದಿನ ಶಾಂತಿಯುತವಾಗಿ ಪ್ರತಿಭಟನೆ ನಡೆಯಲಿದ್ದು, ಸರ್ಕಾರ ಸ್ಪಂದಿಸದಿದ್ದರೆ ಉಗ್ರವಾದ ಹೋರಾಟ ಮಾಡೋದಾಗಿ ಸಂಘ ತಿಳಿಸಿದೆ. ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಲರಾಮಯ್ಯ ಸೇರಿದಂತೆ, ರಾಜ್ಯ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಈ ವೇಳೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ; ಬಿ.ವೈ. ವಿಜಯೇಂದ್ರ

Spread the loveತುಮಕೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರಕಾರದ ನಿರ್ಧಾರ ಕುರಿತಂತೆ ಉತ್ತರ ನೀಡಿದ ಅವರು, ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ