Breaking News

ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

Spread the love

ಬೆಂಗಳೂರು:ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಈ ಹಿಂದೆಯೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು. ಆದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿದ್ದರಿಂದ ರೊಚ್ಚಿಗೆದ್ದ ಯುವಕರು ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಯುವಕರ ಕಿಚ್ಚು ಜೋರಾಗುತ್ತಿದ್ದಂತೆಯೇ ಇತ್ತ ಕರ್ನಾಟಕ ಆರ್ಥಿಕ ಇಲಾಖೆ  24 ಸಾವಿ ಹುದ್ದೆಗಳ ನೇಮಕಾತಿಗೆ ನೇಮಕಾತಿಗೆ ಮಂಜೂರಾತಿ ನೀಡಿದೆ.

ಕರ್ನಾಟಕದ ವಿವಿಧ ಒಟ್ಟು 32 ಇಲಾಖೆಯಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ. ಎ ದರ್ಜೆಯ 542 ಹುದ್ದೆ, ಬಿ ದರ್ಜೆಯ 619 ಹುದ್ದೆ ಹಾಗೂ ಎಫ್ ಡಿ ಸಿ ದರ್ಜೆಯ 23119 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಕ್ಲಿಯರೆನ್ಸ್ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಉದ್ಯೋಗಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ನಿರುದ್ಯೋಗಿಗಳ ಮುಖದಲ್ಲಿ ಮಂದಹಾಸ ಮೂಡುವಂಥ ತೀರ್ಮಾನವನ್ನು ಸರ್ಕಾರ ತೆಗದುಕೊಂಡಿದೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿದ್ದು ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಈ ಹಿಂದೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದರು. ಇನ್ನು ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು, 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಇದು ಅನ್ವಯವಾಗಲಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ