Breaking News

ಬಾಗಲಕೋಟೆ ಕಲ್ಲು ತೂರಾಟದ ಕಿಚ್ಚು: ಮುಧೋಳದಲ್ಲಿ ಬೃಹತ್ ಪ್ರತಿಭಟನೆ, ಮಾನವ ಸರಪಳಿ ನಿರ್ಮಿಸಿ ಆಕ್ರೋಶ

Spread the love

ಬಾಗಲಕೋಟೆಯಲ್ಲಿ ಶಿವಜಯಂತಿ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟದ ಘಟನೆ ಈಗ ಜಿಲ್ಲೆಯಾದ್ಯಂತ ಕಿಚ್ಚು ಹಚ್ಚಿದೆ. ಈ ಕೃತ್ಯವನ್ನು ಖಂಡಿಸಿ ಮುಧೋಳ ನಗರದಲ್ಲಿ ಇಂದು ವಿವಿಧ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ.

ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಘಟನೆಯನ್ನು ಖಂಡಿಸಿ ಮುಧೋಳ ನಗರದಲ್ಲಿಂದು ಪ್ರತಿಭಟನೆಯ ಬಿಸಿ ಏರಿತ್ತು. ನಗರದ ಪ್ರಮುಖ ವೃತ್ತವಾದ ಛತ್ರಪತಿ ಶಿವಾಜಿ ಮಹಾರಾಜ್ ಸರ್ಕಲ್‌ನಲ್ಲಿ ಜಮಾಯಿಸಿದ ನೂರಾರು ಪ್ರತಿಭಟನಾಕಾರರು, ಕಿಡಿಗೇಡಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ, ಇಂತಹ ಅಹಿತಕರ ಘಟನೆಗಳು ಸಮಾಜದ ಶಾಂತಿಯನ್ನು ಕದಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಪ್ರತಿಭಟನೆಯ ಭಾಗವಾಗಿ ಮುಧೋಳದ ಶಿವಾಜಿ ವೃತ್ತದಲ್ಲಿ ಪ್ರತಿಭಟನಾಕಾರರು ಬೃಹತ್ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. “ಶಿವಜಯಂತಿಯಂತಹ ಪವಿತ್ರ ಆಚರಣೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ. ಈ ಘಟನೆಯ ಹಿಂದೆ ಇರುವ ಮಾಸ್ಟರ್‌ಮೈಂಡ್‌ಗಳನ್ನು ತಕ್ಷಣ ಬಂಧಿಸಬೇಕು” ಎಂದು ಆಗ್ರಹಿಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.


Spread the love

About Laxminews 24x7

Check Also

ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಸೀದಿಯಲ್ಲಿ ಇದ್ದರವರೆಲ್ಲರ ಮೇಲೂ ಪ್ರಕರಣ ದಾಖಲಿಸಿ

Spread the loveಬಾಗಲಕೋಟೆ: ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ ವೇಳೆ ಪಂಕಾ ಮಸೀದಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ