ಸಂಕೇಶ್ವರ–ಯರಗಟ್ಟಿ ರಾಜ್ಯ ಹೆದ್ದಾರಿಯ ಘಟಪ್ರಭಾ ಪಟ್ಟಣದ ಸಮೀಪ, ಘಟಪ್ರಭಾ ಕೆನಾಲ್ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಗಂಭೀರ ಬಿರುಕು ಬಿಟ್ಟು ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿರುವುದರಿಂದ ಅದನ್ನು ನೆಲಸಮ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸತೀಶ ಜಾರಕಿಹೋಳಿ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದರು.
ಸಾರ್ವಜನಿಕರ ಸುರಕ್ಷತೆಯನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸಿ, ಅಂದಾಜು ರೂ. 5.00 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯವನ್ನು 45 ದಿನಗಳೊಳಗೆ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಯಿತು.
ಇದೇ ವೇಳೆ, ದಿನನಿತ್ಯದ ವಾಹನ ಸಂಚಾರಕ್ಕೆ ಯಾವುದೇ ಅಡೆತಡೆ ಉಂಟಾಗದಂತೆ ತಾತ್ಕಾಲಿಕ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನೂ ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
Laxmi News 24×7