Breaking News

ಅಪ್ರಾಪ್ತೆ ಮೇಲೆ ಅತ್ಯಾಚಾರ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

Spread the love

ಬೈಲಹೊಂಗಲ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಗೋಕಾಕ ತಾಲೂಕಿನ ಹೀರೆಹಟ್ಟಿ ಗ್ರಾಮದ ಅಪರಾಧಿ ಲಕ್ಷ್ಮಣ ಹನುಮಂತ ಮುರಗೋಡ (28) ಗೆ 30 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.
ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ 2022ರಲ್ಲಿ ದೂರು ದಾಖಲಾಗಿತ್ತು. ತನಿಖಾಧಿಕಾರಿ ಯು.ಎಚ್.ಸಾತೇಹಳ್ಳಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ
ನೊಂದ ಬಾಲಕಿಗೆ ಜಿಲ್ಲಾ  ಕಾನೂನು ಪ್ರಾಧಿಕಾರದಿಂದ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ  ಎಲ್.ವಿ.ಪಾಟೀಲ ವಾದಮಂಡಿಸಿದ್ದರು.

Spread the love

About Laxminews 24x7

Check Also

ವೈದ್ಯಕೀಯ ಸಿಬ್ಬಂದಿ ಸೇವೆ ಪ್ರಶಂಸಾರ್ಹ

Spread the loveಬೆಳಗಾವಿ: ತುರ್ತು ವೈದ್ಯಕೀಯ ವಿಭಾಗವು ಆಸ್ಪತ್ರೆ ಪ್ರಮುಖ ಆಧಾರಸ್ತಂಭವಾಗಿದೆ. ಅಪಘಾತಗಳು, ಹೃದಯಾಘಾತ, ಸ್ಟ್ರೋಕ್, ವಿಷಸೇವನೆ, ಗಂಭೀರ ಗಾಯಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ