Breaking News

ಕಿತ್ತೂರು ಅಭಿವೃದ್ಧಿಗೆ ಶಾಸಕ ಬಾಬಾಸಾಹೇಬ್ ಪಾಟೀಲ್ ಹೊಸ ಭಾಷ್ಯ: 36.75 ಕೋಟಿ ರೂ. ವೆಚ್ಚದ ಶ್ರಮಿಕ ವಸತಿ ಶಾಲೆಗೆ ಚಾಲನೆ

Spread the love

ಕಿತ್ತೂರು ಕ್ಷೇತ್ರದ ಕಾರ್ಮಿಕರ ಮಕ್ಕಳ ಪಾಲಿಗೆ ಹೊಸ ಆಶಾಕಿರಣ ಮೂಡಿದೆ. ಶಾಸಕ ಬಾಬಾಸಾಹೇಬ್ ಪಾಟೀಲ್ ಅವರ ಸತತ ಪ್ರಯತ್ನದ ಫಲವಾಗಿ, 36.75 ಕೋಟಿ ರೂಪಾಯಿ ವೆಚ್ಚದ ಹೈಟೆಕ್ ‘ಶ್ರಮಿಕ ವಸತಿ ಶಾಲೆ’ ನಿರ್ಮಾಣಕ್ಕೆ ಅದ್ಧೂರಿ ಭೂಮಿ ಪೂಜೆ ನೆರವೇರಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕೈಗಾರಿಕಾ ಪ್ರದೇಶದ ಸಮೀಪ, ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಿರ್ಮಾಣವಾಗಲಿರುವ ಶ್ರಮಿಕ ವಸತಿ ಶಾಲೆಯ ಭೂಮಿ ಪೂಜಾ ಸಮಾರಂಭ ಯಶಸ್ವಿಯಾಗಿ ಜರುಗಿತು. ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಈ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದರು. ಬಡ ಹಾಗೂ ಮಧ್ಯಮ ವರ್ಗದ ಕಾರ್ಮಿಕರ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಸಂಕಲ್ಪದೊಂದಿಗೆ ಆರಂಭವಾಗಿರುವ ಈ ಶಾಲೆಯು ಕಿತ್ತೂರು ಕ್ಷೇತ್ರದ ಶೈಕ್ಷಣಿಕ ಇತಿಹಾಸದಲ್ಲಿ ಒಂದು ಹೊಸ ಮೈಲಿಗಲ್ಲಾಗಲಿದೆ ಎಂದು ಶಾಸಕರು ಹರ್ಷ ವ್ಯಕ್ತಪಡಿಸಿದರು.

ಸುಮಾರು 600 ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ವಸತಿ ಸಹಿತ ಶಿಕ್ಷಣ ನೀಡಬಲ್ಲ ಈ ಬೃಹತ್ ಕಟ್ಟಡವನ್ನು ಮುಂದಿನ ವರ್ಷದೊಳಗೆ ಪೂರ್ಣಗೊಳಿಸಿ ಸಾರ್ವಜನಿಕ ಅರ್ಪಣೆ ಮಾಡುವ ಗುರಿ ಹೊಂದಲಾಗಿದೆ. ಇದೇ ವೇಳೆ ಮಾತನಾಡಿದ ಶಾಸಕರು, ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಅನರ್ಹರು ಪಡೆಯುತ್ತಿರುವುದರ ವಿರುದ್ಧ ಕಠಿಣ ಎಚ್ಚರಿಕೆ ನೀಡಿದರಲ್ಲದೆ, ಶಾಲೆಗಳಲ್ಲಿ ಮೊಬೈಲ್ ನಿಷೇಧಿಸುವ ಸರ್ಕಾರದ ನಿಲುವಿಗೆ ಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಕ್ಷೇತ್ರದ ಮಕ್ಕಳ ಭವಿಷ್ಯಕ್ಕಾಗಿ ಈ ಬೃಹತ್ ಅನುದಾನ ಮಂಜೂರು ಮಾಡಿದ ಸಚಿವ ಸಂತೋಷ್ ಲಾಡ್ ಅವರಿಗೆ ಅಭಿನಂದನೆ ಸಲ್ಲಿಸಿದ ಶಾಸಕರ ಈ ಜನಪರ ಕೆಲಸಕ್ಕೆ ಸ್ಥಳೀಯರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಅನುದಾನ ದುಂದುವೆಚ್ಚ ಕಾನೂನು ಕ್ರಮಕ್ಕೆ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಗ್ರಹ

Spread the loveಬೆಳಗಾವಿ: ನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಪ್ರವಾಸೋದ್ಯಮ ಇಲಾಖೆ ಬಿಡುಗಡೆ ಮಾಡಿರುವ 50ಲಕ್ಷ ರೂ. ಅನುದಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ