Breaking News

ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ವಂಚನೆ: ಆರೋಪಿಗಳಿಬ್ಬರ ಬಂಧನ

Spread the love

ಬೆಂಗಳೂರು: ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ ಹಣ ವಸೂಲಿ ಮಾಡಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ ಬನಶಂಕರಿಯಲ್ಲಿರುವ ಜಿಎಸ್‌ಟಿ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ್ ಹಾಗೂ ದಾದಾಪೀರ್ ಅಧಿಕಾರಿಗಳ ಸೋಗಿನಲ್ಲಿ ವಂಚಿಸಿದ್ದಾರೆ.

ಈ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಾಪಾರಿಯ ಬಳಿ ತಾವು ಜಿಎಸ್‌ಟಿ ಅಧಿಕಾರಿಗಳು ಎಂದು ಹೇಳಿಕೊಂಡು ಆತನನ್ನು ಬೆದರಿಸಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ.

ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರು, ಸಿಎಲ್‌ಟಿಎಸ್ ಮತ್ತು ಇಂಟಲಿಜೆನ್ಸ್ ಅಧಿಕಾರಿಗಳಂತೆ ನಕಲಿ ಗುರುತಿನ ಚೀಟಿ ಸಿದ್ಧಪಡಿಸಿಕೊಂಡಿದ್ದರು ಎನ್ನಲಾಗಿದೆ. ಜನವರಿ 10ರಂದು ಪೀಣ್ಯದಲ್ಲಿರುವ ಗುಟ್ಕಾ ವ್ಯಾಪಾರಿಯೊಬ್ಬರಿಂದ 5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ವಿಚಾರ ಬಹಿರಂಗವಾಗಿದೆ.

ಈ ವಿಚಾರ ತಿಳಿದು ಪರಿಶೀಲಿಸಿದಾಗ ನಕಲಿ ಐಡಿ ಕಾರ್ಡ್‌ಗಳು ಹಾಗೂ ಸರ್ಚ್ ವಾರೆಂಟ್ ಪ್ರತಿಗಳು ಪತ್ತೆಯಾಗಿದೆ. ತಕ್ಷಣ ಅಧಿಕಾರಿಗಳು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗ್ತಿದೆ: ಡಿಕೆಶಿ

Spread the loveಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವ್ರೇ ತಿಳಿಸಿದ್ರು. ಆರೋಗ್ಯ ಇಲಾಖೆ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ