Breaking News

ಅಕ್ರಮವಾಗಿ ಗೋವಾ ಮದ್ಯ ಮಾರಾಟ: ಆರೋಪಿ ವಶಕ್ಕೆ

Spread the love

ಬೆಳಗಾವಿ: ಬೆಳಗಾವಿ ನಗರದ ಉದ್ಯಮಬಾಗದ ಅರುಣ ಇಂಜಿನಿಯರಿಂಗ್ ಫ್ಯಾಕ್ಟರಿ ಎದುರಿಗೆ,  ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ  ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕಿರುವ ವಿವಿಧ ಕಂಪನಿಯ ರಮ್, ವೋಡಾ, ವಿಸ್ಕಿ ಒಟ್ಟು 16 ಸರಾಯಿ ಬಾಟಲಿಗಳನ್ನು ಕೈಚೀಲದಲ್ಲಿಟ್ಟುಕೊಂಡು ಮಾರಾಟದಲ್ಲಿ ತೊಡಗಿದ್ದಾಗ ಉದ್ಯಮಬಾಗ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಪರಮೇಶ್ವರ ದೇವಪ್ಪ ನಾಯಿಕ (50) ಬಂದಿತ ಆರೋಪಿ. ಉದ್ಯಮಬಾಗ ಪೊಲೀಸ್ ಠಾಣೆಯ ಪಿಎಸ್‌ಐ ಕಿರಣ ಸಿ ಹೊನಕಟ್ಟಿ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ, ಒಟ್ಟು ರೂ.4,760/- ಮೌಲ್ಯದ 12 ಲೀಟರ್ ನಷ್ಟು ಅಕ್ರಮ ಸರಾಯಿ ಹಾಗೂ ರೂ.3,550 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ವಿರುದ್ಧ ಉದ್ಯಮಬಾಗ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.15/2026 ಕಲಂ.32, 34 ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.

 


Spread the love

About Laxminews 24x7

Check Also

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯಿಂದ ಶನಿವಾರ ಬಸವ ಜಯಂತಿ ಪೂರ್ವಭಾವಿ ಸಭೆ

Spread the loveಬೆಳಗಾವಿ: ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕವು ಬಸವ ಜಯಂತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ