Breaking News

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the love

ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ  ರಾಹುಲ್  ಜಾರಕಿಹೊಳಿ ಅವರು ಯಮಕಮರಡಿ ಕ್ಷೇತ್ರದ ಪರಕನಹಟ್ಟಿ ಗ್ರಾಮದಲ್ಲಿ ಇಂದು ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ  ಜಾರಕಿಹೊಳಿ ಅವರ ವಿಶೇಷ ಆಸಕ್ತಿಯಿಂದ, ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂದಾಜು ರೂ. 72.00 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹೆಚ್ಚುವರಿ ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ಅಂದಾಜು ರೂ. 20.00 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ವಾಲ್ಮೀಕಿ ಸಮುದಾಯ ಭವನವನ್ನು ಸಹ ಉದ್ಘಾಟಿಸಿದರು. ಜೊತೆಗೆ, ರೂ. 10.00 ಲಕ್ಷ ವೆಚ್ಚದ ನೂತನ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.

ಗ್ರಾಮದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಶಾಸಕರು ಸದಾ ಬದ್ದರಾಗಿ ಕೆಲಸವನ್ನು ಮಾಡುತ್ತಿದ್ದಾರೆ ‌ಎಂದು ಈ ಸಂದರ್ಭದಲ್ಲಿ ಮಾತನಾಡಿ‌ ತಿಳಿಸಿದರು.

ಈ ವೇಳೆ ಸಚಿವರ ಆಪ್ತ ಸಹಾಯಕರಾದ ಶ್ರೀ ಜಂಗ್ಲಿ ಸಾಬ್ ನಾಯಕ್ ವಿನೋದ್ ಡೋಗ್ರೆ ಶಿಕ್ಷಕರ ಸಿಬ್ಬಂದಿ ವರ್ಗದವರು ಊರಿನ ಹಿರಿಯರು ಗ್ರಾಮಸ್ಥರು ಮುಖಂಡರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮೀಶನರ್‌ ಎದೆ ನೋವು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ

Spread the loveಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮೀಶನರ್‌ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ