Breaking News

ಲಾರಿಗೆ ಡಿಕ್ಕಿ ಹೊಡೆದ ಕಾರು: ಮೂವರು ಸಾವು

Spread the love

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತರನ್ನು ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ (38), ಗಂಗಾಧರ್ (35) ಮತ್ತು ಲೋಹಿತ್ (40) ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಐವರು ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದರು.

ಮಂತ್ರಾಲಯದಿಂದ ಕುಣಿಗಲ್ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅತಿವೇಗ ಮತ್ತು ಚಾಲಕರ ಅಜಾಗರೂಕತೆ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನು ಡಿಕ್ಕಿಯ ರಭಸಕ್ಕೆ ಚಾಲಕರ ಬದಿಯಲ್ಲಿ ಕುಳಿತಿದ್ದ ವ್ಯಕ್ತಿಯ ತಲೆ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಗಾಯಗೊಂಡ ಇಬ್ಬರನ್ನು ತಕ್ಷಣವೇ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.


Spread the love

About Laxminews 24x7

Check Also

ಚಿತ್ರದುರ್ಗ ಮಠದ ಮಾಜಿ ಆಡಳಿತಾಧಿಕಾರಿಗೆ ನ್ಯಾಯಾಂಗ ಬಂಧನ

Spread the love ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಪೋಕ್ಸೊ ಸಂತ್ರಸ್ತ ವಿದ್ಯಾರ್ಥಿನಿಯರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ