Breaking News

ಕತ್ತು ಕೊಯ್ದು ಯುವಕನ ಕೊ*ಲೆ -ಹೊಲದಲ್ಲಿ ಶವ ಪತ್ತೆ

Spread the love

ಗದಗ: ಜಿಲ್ಲೆಯ ಲಕ್ಷ್ಮೀಶ್ವರ ಸಮೀಪದ ಶಿಗ್ಲಿ ಗ್ರಾಮದ ಯುವಕನನ್ನು ಕತ್ತು ಕೊಯ್ದು ಕ್ರೂರವಾಗಿ ಹ*ತ್ಯೆ ಮಾಡಿರುವ ದುರ್ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಮಹಮ್ಮದ ಫಾರೋಕ್ ಶೇಖ್ ಸನದಿ (25) ಎಂದು ಗುರುತಿಸಲಾಗಿದೆ ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹರ್ಲಾಪುರ ಗ್ರಾಮದ ನಿವಾಸಿ ಆಗಿರುವ ಫಾರೋಕ್ ಸದ್ಯ ಶಿಗ್ಲಿ ಗ್ರಾಮದಲ್ಲಿ ವಾಸವಾಗಿದ್ದ ಇದೀಗ ಲಕ್ಷ್ಮೀಶ್ವರ ಸಮೀಪದ ಜಮೀನೊಂದರಲ್ಲಿ ಆತನ ಶವ ಪತ್ತೆಯಾಗಿದೆ.ಅಪರಿಚಿತರು ಕತ್ತು ಕೊಯ್ದು ಹ*ತ್ಯೆ ನಡೆಸಿ ಬಳಿಕ ಶವವನ್ನು ಹೊಲದಲ್ಲಿ ಬಿಸಾಡಿರುವ ಸಾಧ್ಯತೆ ವ್ಯಕ್ತವಾಗಿದೆ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಹತ್ಯೆಗೆ ಕಾರಣವೇನು ಎಂಬುದು ಇನ್ನಷ್ಟು ತಿಳಿದು ಬರಬೇಕಿದೆ.


Spread the love

About Laxminews 24x7

Check Also

ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

Spread the love ಗದಗ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಗದಗ  ಜಿಲ್ಲೆಯ ರೋಣ  ತಾಲೂಕಿನ ಮೆಣಸಗಿ ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ