Breaking News

ನಟ ದರ್ಶನ್ ಕೇಸ್: ಬೃಹತ್ ಪ್ರತಿಭಟನೆಗೆ ಕರೆ ನೀಡಿದ ಕನ್ನಡ ಒಕ್ಕೂಟ

Spread the love

ನಟ ದರ್ಶನ್‌ ಮತ್ತೊಮ್ಮೆ ಪರಪ್ಪನ ಅಗ್ರಹಾರದ ಪಾಲಾಗಿ 187 ದಿನಗಳಾಗಿವೆ. ಕೊರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ಇದೀಗ ಪೊಲೀಸರ ತನಿಖೆಯ ಮೇಲೆಯೇ ಹಲವರು ಅನುಮಾನಗಳು ಮೂಡುತ್ತಿವೆ‌. ಮೊದಲೇ ಷಡ್ಯಂತ್ರ ಮತ್ತು ಪಿತೂರಿ ನಡೆದಿದೆ ಎನ್ನುವ ವಾದ ನಡೆಯುತ್ತಿತ್ತು.

ಪಾರದರ್ಶಕವಾದ ತನಿಖೆಯನ್ನು ಪೊಲೀಸರು ಮಾಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು,ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆಯನ್ನು ಕೂಡ ಮಾಡುತ್ತಿದ್ದರು.

ಇದೀಗ ಬಹಿರಂಗವಾಗಿ ನ್ಯಾಯಾಲಯಕ್ಕೆ ಸುಳ್ಳು ಸಾಕ್ಷಿಗಳನ್ನು ನೀಡಲಾಗಿದೆ. ಸ್ಥಳ ಮಹಜರು ವೇಳೆ ಪೊಲೀಸರಿಂದ ಪ್ರಮಾದವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಕೂಡ ಆಗಿದೆ.ಎಸಿಪಿ ಚಂದನ್ ಮತ್ತು ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅವರು ನಟ ದರ್ಶನ್ ವಿರುದ್ಧ ತನಿಖೆಯ ಹೆಸರಿನಲ್ಲಿ ‘ನಕಲಿ ದಾಖಲೆ’ಗಳನ್ನು ಸೃಷ್ಟಿಸಿದ್ದಾರೆ ಎಂಬ ಗಂಭೀರ ಆರೋಪವನ್ನು ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟ ಮಾಡಿದೆ. ಇಷ್ಟೇ ಅಲ್ಲ ಇದೇ ಮಾರ್ಚ್ ಹನ್ನೊಂದರಂದು ಪ್ರತಿಭಟನೆ ಕೂಡ ಮಾಡಲು ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದ ಪ್ರಮುಖರಾದ ನಟರಾಜ್ ಬೊಮ್ಮಸಂದ್ರ ನ್ಯಾಯ ಸಮ್ಮತವಾಗಿ ತನಿಖೆ ನಡೆಯಬೇಕೇ ಹೊರತು ಸುಳ್ಳು ದಾಖಲೆಗಳ ಮೂಲಕ ಯಾರನ್ನೂ ಸಿಲುಕಿಸಬಾರದು ಎಂದು ಕಿಡಿಕಾರಿದ್ದಾರೆ.ಎಸಿಪಿ ಚಂದನ್ ಕುಮಾರ್ ಮತ್ತು ‍ಗಿರೀಶ್ ನಾಯಕ್ ಅವರನ್ನು ಈ ಕೂಡಲೇ ಸೇವೆಯಿಂದ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರ ಬುಧವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕರೆಯನ್ನು ಕೂಡ ನೀಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ