Breaking News

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Spread the love

ಉಡುಪಿ: ಪೊಲೀಸ್ ಮ್ಯಾರಥಾನ್  ವೇಳೆ ಕುಸಿದು ಬಿದ್ದು ಎಸ್‌ಐ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ  ನಡೆದಿದೆ.

ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಪಕ್ಕದಲ್ಲೇ ಇದ್ದ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸಿರ್ ಹುಸೇನ್ ಸಾವನ್ನು ಆಸ್ಪತ್ರೆ ವೈದ್ಯರು ದೃಢಪಡಿಸಿದರು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನಾಸಿರ್ 2010 ಬ್ಯಾಚ್‌ನ ಪೊಲೀಸ್ ಅಧಿಕಾರಿ. 58 ವರ್ಷದ ನಾಸಿರ್ ಹುಸೇನ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದರು. ಇತ್ತೀಚೆಗೆ ಶೆಟ್ಟಿಕಟ್ಟೆ ಅಪಘಾತ ನಡೆದಾಗ ಅಧಿಕಾರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಕುಂದಾಪುರ ಗ್ರಾಮಾಂತರ ಠಾಣೆಗೆ ಬಂದಿದ್ದರು.


Spread the love

About Laxminews 24x7

Check Also

ಬ್ಲ್ಯಾಕ್ ಫಂಗಸ್ ಚಿಕಿತ್ಸೆ:ಕನ್ನಡಿಗ ಬಾಂಡ್ಯ ಶ್ರೀಕಾಂತ ಪೈ ಸಂಶೋಧನೆ

Spread the loveಗಂಗೊಳ್ಳಿ (ಉಡುಪಿ): ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅತ್ಯಂತ ಪರಿಣಾಮಕಾರಿ ಎನಿಸಿರುವ ‘ಲೈಪೊಸೊಮನ್ ಆಂಪೊಟೆರಿಸಿನ್ ಬಿ ಔಷಧವನ್ನು ಭಾರತ್ ಸೀರಮ್ಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ