Breaking News

ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ…………

Spread the love

ದಾವಣಗೆರೆ: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಜಯರಾಮ್(18) ಮೃತ ವಿದ್ಯಾರ್ಥಿ. ರಿಸಲ್ಟ್​ ಬಂದ ಕೂಡಲೇ ತಾನು ಫೇಲಾಗಿರುವ ವಿಷಯ ತಿಳಿದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ದಾವಣಗೆರೆ ಜಿಲ್ಲೆಯ ಹರಿಹರದ ಪಕ್ಕೀರಸ್ವಾಮಿ ಬಳಿ ಈ ಘಟನೆ ನಡೆದಿದೆ. ಭೌತಶಾಸ್ತ್ರ ವಿಷಯದಲ್ಲಿ ಮಾತ್ರ ಅನುತ್ತೀರ್ಣಗೊಂಡಿದ್ದು, ಫೇಲಾದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ