Breaking News

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Spread the love

ಬೆಂಗಳೂರು: ಇರಾನ್- ಇಸ್ರೇಲ್ ಯುದ್ಧದಿಂದಾಗಿಮಧ್ಯ ಪ್ರಾಚ್ಯದಲ್ಲಿ ಸಿಲುಕಿರೋ ಕರ್ನಾಟಕದವರ ರಕ್ಷಣೆಗೆ ಕರ್ನಾಟಕ ಸರ್ಕಾರ ಕ್ರಮವಹಿಸಿದೆ ಅಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ  ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾರು ಆತಂಕವಾಗೋದು ಬೇಡ. ರಾಜ್ಯ ಸರ್ಕಾರ ಕೇಂದ್ರ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದೆ. ಎಲ್ಲರ ರಕ್ಷಣೆಗೂ ಕ್ರಮ ತೆಗೆದುಕೊಳ್ಳಲಿದೆ ಎಂದು ಅಭಯ ನೀಡಿದರು.

ಶನಿವಾರದಿಂದಲೇ ಸಹಾಯವಾಣಿ ಪ್ರಾರಂಭ ಮಾಡಲಾಗಿದೆ. ಈವರೆಗೂ 109 ಜನ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಈಗಾಗಲೇ ವಿದೇಶಾಂಗ ಇಲಾಖೆ ಮತ್ತು ದೆಹಲಿಯಲ್ಲಿರೋ ನಮ್ಮ ರೆಸಿಡೆಂಟ್ ಕಮೀಷನರ್ ಕೂಡ ಕೇಂದ್ರದ ಜೊತೆ ಸಂಪರ್ಕದಲ್ಲಿ ಇದ್ದಾರೆ ಅಂತ ಮಾಹಿತಿ ನೀಡಿದ್ರು.

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವವರಿಗೆ 3 ವಿಷಯಗಳ ಬಗ್ಗೆ ಆತಂಕ ಇದೆ. ನಮ್ಮನ್ನ ಹೇಗೆ ವಾಪಸ್ ಕರೆಸುತ್ತೀರಾ? ವಿಶೇಷ ವಿಮಾನದ ಮೂಲಕನಾ ಹೇಗೆ ಅಂತ. ನಾವು ಕೇಂದ್ರದ ಜೊತೆ ಮಾತಾಡ್ತಾ ಇದ್ದೇವೆ. ಸದ್ಯ ಈಗ ಏರ್ ಟ್ರಾಫಿಕ್ ನಿಷೇಧ ಆಗಿದೆ. ಏರ್ ಟ್ರಾಫಿಕ್ ಕ್ಲಿಯರ್ ಆದ ಕೂಡಲೇ ಕೇಂದ್ರ ಸರ್ಕಾರ ಹೇಗೆ ಕರೆಸಿಕೊಳ್ಳುತ್ತದೆ ನಮಗೆ ಮಾಹಿತಿ ಸಿಗುತ್ತದೆ. ಏರ್ ಟ್ರಾಫಿಕ್ ಕ್ಲಿಯರ್ ಆಗೋವರೆಗೂ ತೆರವು ಕೆಲಸ ಆಗೊಲ್ಲ. ಹೀಗಾಗಿ ಎಲ್ಲರೂ ಶಾಂತವಾಗಿ ಇರಬೇಕು ಅಂತ ಮನವಿ ಮಾಡಿದ್ರು. ಕದನ ವಿರಾಮ ಆದ ಕೂಡಲೇ ವಾಪಸ್ ಕರೆಸಲು ಕ್ರಮ ಆಗುತ್ತದೆ ಅಂತ ತಿಳಿಸಿದರು.

ಏರ್ ಪೋರ್ಟ್ ನಲ್ಲಿ ಸಿಲುಕಿರೋರು ವೀಸಾ ಸಮಸ್ಯೆ ಇದ್ದರೆ ಸ್ಥಳೀಯ ರಾಯಭಾರಿ ಕಚೇರಿಗೆ ಅಥವಾ ನಮಗೆ ಕರೆ ಮಾಡಿದ್ರೆ ವೀಸಾ ವ್ಯವಸ್ಥೆ ಮಾಡಲಾಗುತ್ತದೆ ಅಂತ ತಿಳಿಸಿದರು. ಇನ್ನು ಕರ್ನಾಟಕದವರು ವಾಪಸ್ ಬರೋವರೆಗೂ ಅಲ್ಲಿ ಆಗೋ ಖರ್ಚು ವೆಚ್ಚಗಳನ್ನ ರಾಜ್ಯ ಸರ್ಕಾರವೇ ಭರಿಸಲಿದೆ. ಇದನ್ನ ನಾವು ಕೇಂದ್ರ ಸರ್ಕಾರದ ಮೂಲಕ ಮಾಡಬೇಕು. ಕೇಂದ್ರ ಸರ್ಕಾರ ಹಣವನ್ನ ಭರಿಸಿ ನಮಗೆ ಮಾಹಿತಿ ಕೊಟ್ಟರೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಹಣವನ್ನ ಭರಿಸಲಿದೆ ಅಂತ ಸ್ಪಷ್ಟಪಡಿಸಿದರು.

ನಿನ್ನೆ ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಬ್ ಕಮಿಟಿ ಸಭೆ ಮಾಡಿದೆ. ಆದ್ರೆ ಯಾವುದೇ ಮಾಹಿತಿ ಕೊಟ್ಟಿಲ್ಲ. ಯುದ್ಧ ಇನ್ನು ಒಂದು ವಾರ ಆಗುವ ಮಾಹಿತಿ ಇದೆ. ಹೀಗಾಗಿ ಯಾರು ಆತಂಕಕ್ಕೆ ಒಳಗಾಗೋದು ಬೇಡ. ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ಕೊಡಲಿದೆ. ಅಲ್ಲಿವರೆಗೂ ಎಲ್ಲರು ಶಾಂತಿಯಿಂದ ಇರಬೇಕು ಅಂತ ಮನವಿ ಮಾಡಿದರು. ಮಧ್ಯಪ್ರಾಚ್ಯ ಭಾಗದಲ್ಲಿ ಕೆಲಸ ಕರ್ನಾಟಕದವರು ಮಾಡ್ತಿರೋರು ಸ್ಥಳೀಯ ರಾಯಭಾರಿ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಸಿಕೊಳ್ಳಿ. ಸ್ಥಳೀಯ ಆಡಳಿತ ಕೊಡುವ ನಿಯಮ ಪಾಲನೆ ಮಾಡಬೇಕು ಅಂತ ತಿಳಿಸಿದರು.


Spread the love

About Laxminews 24x7

Check Also

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Spread the loveಬೆಂಗಳೂರು: ಕುರ್ಚಿ ಆಸೆಗಾಗಿ ಡಿಸಿಎಂ ಡಿಕೆ ಶಿವಕುಮಾರ್  ಅವರು ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ