Breaking News

ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕಾರ್ಯಾಗಾರ, ಶೈಕ್ಷಣಿಕ ಸಮಾವೇಶ

Spread the love

ಗದಗ: ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯ ಘಟಕ, ಗದಗ ಜಿಲ್ಲಾ ಘಟಕ ಹಾಗೂ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಶೇ. 100% ರಷ್ಟು ಫಲಿತಾಂಶ ಪಡೆದ ಶಾಲಾ ಮುಖ್ಯಸ್ಥರಿಗೆ ಗೌರವ ಹಾಗೂ ಜಿಲ್ಲಾ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ ಶೈಕ್ಷಣಿಕ ಸಮಾವೇಶ – 2026 ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಮಾರ್ಚ್ 4 ರಂದು ನಡೆಯಲಿದೆ ಅಂತ ಸಂಘದ ಅಧ್ಯಕ್ಷ ಎಂ. ಕೆ ಲಮಾಣಿ ಮಾಹಿತಿ ನೀಡಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾವೇಶದ ಸಾನಿಧ್ಯವನ್ನು ಜಗದ್ಗುರು ಡಾ. ತೊಂಟದಾರ್ಯ ಸಿದ್ದರಾಮ ಸ್ವಾಮಿಜಿಗಳು ವಹಿಸಿಕೊಳ್ಳಲಿದ್ದು, ಅಧ್ಯಕ್ಷತೆಯನ್ನು ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಡಿ. ಆರ್ ಪಾಟೀಲ ವಹಿಸಿಕೋಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಕೆ ಪಾಟೀಲ ಮಾಡಲಿದ್ದಾರೆ. ಇನ್ನೂ ಮುಖ್ಯ ಅತಿಥಿಗಳಾಗಿ ಬಸವರಾಜ ಬೊಮ್ಮಾಯಿ, ಸಲೀಂ ಅಹ್ಮದ್, ಜಿ. ಎಸ್ ಪಾಟೀಲ, ಸಿ.ಸಿ ಪಾಟೀಲ, ಪಿ.ಸಿ ಗದ್ದಿಗೌಡರ, ಎಸ್. ವ್ಹಿ ಸಂಕನೂರ, ಡಾ. ಚಂದ್ರು ಲಮಾಣಿ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದರು.
ಬಸವರಾಜ ಹೊರಟ್ಟಿ ಅವರು ಸಭಾಪತಿಗಳಾಗಿ 45 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಜಿಲ್ಲಾ ಘಟಕದಿಂದ ವಿಶೇಷ ಸನ್ಮಾನ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿರುವ ಎಲ್ಲ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಉತ್ತಿರ್ಣರಾಗಬೇಕು ಎನ್ನುವುದು ನಮ್ಮ ಮೂಲ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಶೇ. 100% ಫಲಿತಾಂಶ ಪಡೆದ ಶಾಲಾ ಮುಖ್ಯಸ್ಥರಿಗೆ ಗೌರವಿಸುವ ಮೂಲಕ ಪ್ರೋತ್ಸಾಹ ನೀಡಲಾಗುವುದು. ಪ್ರಸಕ್ತ ವರ್ಷ ಫಲಿತಾಂಶ ಸುಧಾರಣೆಗೆ ಎಲ್ಲ ಅಗತ್ಯ ಕ್ರಮ ಕೈಗೋಳ್ಳಲಾಗಿದೆ. ಶಾಲಾ ಆರಂಭಕ್ಕೂ ಮುನ್ನ ಒಂದು ತಾಸು ಮುಂಚಿತವಾಗಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ನಂತರ ಶಾಲಾ ಅವಧಿ ಮುಗಿದ ನಂತರವೂ ಶಾಲಾ ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸಲಾಗಿದೆ ಎಂದರು.
ಈ ವೇಳೆ ಉಮೇಶ ಹಿರೇಮಠ, ಬಿ. ಡಿ ಯರಗೊಪ್ಪ, ಬಿ. ಕೆ ನಿಂಬನಗೌಡ್ರ, ಎಲ್. ಎಸ್ ಅರಳಿಹಳ್ಳಿ, ಬೂದಪ್ಪ ಅಂಗಡಿ, ಗಿರೀಶ್ ನರಗುಂದ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಕತ್ತು ಕೊಯ್ದು ಯುವಕನ ಕೊ*ಲೆ -ಹೊಲದಲ್ಲಿ ಶವ ಪತ್ತೆ

Spread the loveಗದಗ: ಜಿಲ್ಲೆಯ ಲಕ್ಷ್ಮೀಶ್ವರ ಸಮೀಪದ ಶಿಗ್ಲಿ ಗ್ರಾಮದ ಯುವಕನನ್ನು ಕತ್ತು ಕೊಯ್ದು ಕ್ರೂರವಾಗಿ ಹ*ತ್ಯೆ ಮಾಡಿರುವ ದುರ್ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ