Breaking News

ರಾಜ್ಯದಲ್ಲಿ 56 ಸಾವಿರ ಹುದ್ದೆಗಳ ಭರ್ತಿ ಐತಿಹಾಸಿಕ ನಿರ್ಧಾರ: ಮಧು ಬಂಗಾರಪ್ಪ

Spread the love

ಶಿವಮೊಗ್ಗ: ರಾಜ್ಯದಲ್ಲಿ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರವಾಗಿದೆ. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ನೇಮಕಾತಿ ನಡೆದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸೋಮವಾರ ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಆಶೀರ್ವಾದ ಪಡೆದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೀಸಲಾತಿ ನಿಗದಿ ಪಡಿಸದೆ ನೇಮಕಾತಿ ಮಾಡಿಕೊಂಡರೆ ಕೆಲವು ವರ್ಗಗಳಿಗೆ ಅನ್ಯಾಯವಾಗುತ್ತದೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಇಲಾಖೆಯಲ್ಲಿ ಹೆಚ್ಚಿನ ಉದ್ಯೋಗ ಆಕಾಂಕ್ಷಿಗಳಿದ್ದಾರೆ. ರಾಜ್ಯದಲ್ಲಿ 56 ಸಾವಿರ ಹುದ್ದೆಗಳನ್ನು ಏಕಕಾಲಕ್ಕೆ ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರವಾಗಿದೆ. ಮುಂದಿನ ದಿನಗಳಲ್ಲಿ ಮತ್ತೊಂದು ಹಂತದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

Spread the loveಶಿವಮೊಗ್ಗ: ಇಲ್ಲಿನ ಮೃಗಾಲಯದಲ್ಲಿ ನೀರಾನೆ  ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ  ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ