Breaking News

ಬೆಳಗಾವಿಗೆ ಕಚೇರಿ ಸ್ಥಳಾಂತರಕ್ಕೆ ಪ್ರಹ್ಲಾದ ಜೋಶಿ ಅಡ್ಡಗಾಲು

Spread the love

ಬೆಳಗಾವಿ: ಧಾರವಾಡ ಕೆಐಎಡಿಬಿ ವಲಯ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಬೇಕೆನ್ನುವ ರಾಜ್ಯ ಸರಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಡಗಾಲು ಹಾಕಿದ್ದಾರೆ. ತನ್ಮೂಲಕ ಬಿಯಾಂಡ್ ಹುಬ್ಬಳ್ಳಿಗೆ ಅವಕಾಶವಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಬೆಳಗಾವಿ ಬೆಳವಣಿಗೆಗೆ ಹುಬ್ಬಳ್ಳಿಯ ರಾಜಕಾರಣಿಗಳು ನಿರಂತರ ಅಡ್ಡಿಯಾಗುತ್ತಾರೆ ಎನ್ನುವ ಆರೋಪ ಬೆಳಗಾವಿಯಲ್ಲಿ ಮೊದಲಿನಿಂದಲೂ ಇದೆ. ಅದು ಪದೇ ಪದೆ ಸಾಬೀತಾಗುತ್ತಲೂ ಇದೆ.ಇದೀಗ ಕೆಐಎಡಿಬಿ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸುವ ರಾಜ್ಯ ಸರಕಾರದ ಆದೇಶವನ್ನು ಫ್ರಹ್ಲಾದ ಜೋಶಿ ತಡೆದಿದ್ದಾರೆ. ಬೆಳಗಾವಿ ರಾಜಕಾರಣಿಗಳಿಗಿಂತ ತಾವು strong ಎನ್ನುವುದನ್ನು ಸಾಬೀತುಪಡಿಸಿದ್ದಾರೆ.

ಧಾರವಾಡ ಕೆಐಎಡಿಬಿ ವಲಯ ಕಚೇರಿ ಸ್ಥಳಾಂತರ ಕೈಬಿಟ್ಟ ರಾಜ್ಯ ಸರ್ಕಾರ: ಸಚಿವ ಜೋಶಿ ಸ್ವಾಗತ

  • ಕೇಂದ್ರ ಸಚಿವರ ಮನವಿಗೆ ರಾಜ್ಯ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಸ್ಪಂದನೆ; ಪ್ರಹ್ಲಾದ ಜೋಶಿ ಅಭಿನಂದನೆ

ಹುಬ್ಬಳ್ಳಿ: ಧಾರವಾಡ ಕೆಐಎಡಿಬಿ ವಲಯ ಕಚೇರಿ ಸ್ಥಳಾಂತರಿಸದಂತೆ ರಾಜ್ಯ ಸರ್ಕಾರದ ಗಮನ ಸೆಳೆದಿದ್ದೆ. ಸರ್ಕಾರ ತಮ್ಮ ಮನವಿಗೆ ಸ್ಪಂದಿಸಿರುವುದು ಖುಷಿಯ ವಿಚಾರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ತಮ್ಮ ಒತ್ತಾಯಕ್ಕೆ ಸ್ಪಂದಿಸಿ ಧಾರವಾಡದ ಕೆಐಎಡಿಬಿ ವಲಯ ಕಚೇರಿ ಸ್ಥಳಾಂತರ ಸ್ಥಗಿತಗೊಳಿಸಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ ಜೋಶಿ.

ಸರ್ಕಾರದ ಈ ನಿರ್ಧಾರದಿಂದ ಅಂತೂ ಉತ್ತರ ಕರ್ನಾಟಕ ಭಾಗಕ್ಕೆ ಅದರಲ್ಲೂ ವಿಶೇಷವಾಗಿ ಧಾರವಾಡ ಜಿಲ್ಲೆ ಕೈಗಾರಿಕಾ ಅಭಿವೃದ್ಧಿ, ಬೆಳವಣಿಗೆಗೆ ಮತ್ತಷ್ಟು ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಏನಿದರ ಹಿನ್ನೆಲೆ: ರಾಜ್ಯ ಸರ್ಕಾರ ಧಾರವಾಡದಲ್ಲಿ ಸುಮಾರು 40 ವರ್ಷಗಳಿಂದ ಇದ್ದಂತಹ ಕೆಐಎಡಿಬಿ ವಲಯ ಕಚೇರಿಯನ್ನು ಬೇರೆಡೆ ಸ್ಥಳಾಂತರಿಸಲು ನಿರ್ಧರಿಸಿತ್ತು. ಆದರೆ, ಇದು ಇಡೀ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದ್ದ ಏಕೈಕ ವಲಯ ಕಚೇರಿ. ಹಾಗಾಗಿ ಇದರ ಸ್ಥಳಾಂತರ ನಿರ್ಧಾರ ಕೈ ಬಿಡುವಂತೆ ಸಚಿವ ಪ್ರಹ್ಲಾದ ಜೋಶಿ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು.

ಇಲ್ಲಿನ ಕೆ ಐಎಡಿಬಿ ವಲಯ ಕಚೇರಿ ಸ್ಥಳಾಂತರ ಬದಲು ಉತ್ತರಕ ರ್ನಾಟಕ ಭಾಗದ ಪ್ರಮುಖ ನಗರಗಳಲ್ಲಿ ಹೊಸದಾಗಿ ಹೆಚ್ಚಿನ ಆಡಳಿತಾತ್ಮಕ ಕಚೇರಿಗಳನ್ನು ಪ್ರಾರಂಭಿಸುವಂತೆ ಜೋಶಿ ಈ ಹಿಂದೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ