Breaking News

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಶ್ವಾನ ದಳದ ತಪಾಸಣೆ

Spread the love

ಬೆಳಗಾವಿ : ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಈಮೇಲ್ ಬಂದ ಹಿನ್ನೆಲೆ ಮಂಗಳವಾರ ತಪಾಸಣೆ ನಡೆಸಲಾಯಿತು.
ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದ ತಕ್ಷಣವೇ ಡಿಸಿಪಿ ನಾರಾಯಣ ಬರಮನಿ ನೇತೃತ್ವದಲ್ಲಿ ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ನ್ಯಾಯಾಲಯ ಸಂಕೀರ್ಣವನ್ನು ಇಂಚಿಂಚು ತಪಾಸಿದರು. ಈ ವೇಳೆ ಕಲಾಪಗಳಿಗೆ ವಿರಾಮ ನೀಡಲಾಗಿತ್ತು. ಎಲ್ಲೂ ಬಾಂಬ್ ಇರುವಿಕೆ ಪತ್ತೆಯಾಗಲಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ನಿರ್ಧರಿಸಲಾಯಿತು. ಬಳಿಕ ಕಲಾಪಗಳು ಎಂದಿನಂತೆ ಮುಂದುವರೆದವು.
ನಮ್ಮ ಕಚೇರಿಗೆ ಮೇಲ್ ಬಂದ ತಕ್ಷಣವೇ ಕೋರ್ಟ್‌ಗೆ ತೆರಳಿ ತಪಾಸಿಸಿದ್ದೇವೆ. ಯಾವುದೇ ಸ್ಪೋಟಕ ವಸ್ತು ಪತ್ತೆಯಾಗಿಲ್ಲ. ಮೇಲ್ ಮಾಡಿದವರನ್ನು ಪತ್ತೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಡಿಸಿಪಿ ನಾರಾಯಣ ಬರಮನಿ ವಿಜಯವಾಣಿಗೆ ತಿಳಿಸಿದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ