ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದಳು. ಸಂಸಾರದ ವಿಚಾರದಲ್ಲಿ ಬೇಸತ್ತು ವೆಸ್ಲಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಶವವನ್ನು ನದಿಯಿಂದ ಪೊಲೀಸರು ಮೇಲೆತ್ತಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7