Breaking News

ಬೆಳಗಾವಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ರೆಡ್ ಜೋನ್ ಘೋಷಣೆ

Spread the love

ಬೆಳಗಾವಿ: ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬೂಷಣ ಬೋರಸೆ ಅವರು ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಿದ್ದಾರೆ.

ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) ಯಾವುದೇ ರೀತಿಯ ಡೋನ್ /ಅನಮ್ಯಾನಡ್ ಏರಿಯಲ್ ವಾಹನ (UAV/Drone) ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

 ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ