Breaking News

ವಿವಿಧ ಬೇಡಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ

Spread the love

ಬೆಳಗಾವಿ: ಒಳ‌ ಮೀಸಲಾತಿಯಲ್ಲಿ ಸೃಷ್ಟಿಯಾಗಿರುವ ರೋಸ್ಟರ್ ಬಿಂದು ಗೊಂದಲ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ನಾಗರೀಕ ಹಕ್ಕುಗಳ ರಕ್ಷಣೆ ಕಾಯ್ದೆ ಮತ್ತು ದೌರ್ಜನ್ಯ ತಡೆಕಾಯ್ದೆಗಳ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ, ಅಪರಾಧಗಳ ಪತ್ತೆ ಮತ್ತು ವಿಚಾರಣೆ ಸರಿಯಾಗಿ ನಡೆದು ರಕ್ಷಣೆಯಾಗುವ ಪ್ರಮಾಣ ಸರಿಯಾಗಿ ಆಗುವಂತೆ ನಿಗಾವಹಿಸಲು ಪ್ರತ್ಯೇಕ ಸಮಿತಿಯನ್ನು ಸ್ಥಾಪಿಸಬೇಕು ಹಾಗೂ ಪ್ರತಿ ಗ್ರಾಮದಲ್ಲಿ ದಲಿತರಿಗೆ ಸ್ಮಶಾನ ಭೂಮಿಯನ್ನು ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಖಾಸಗಿ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು. ಎಸ್.ಸಿ,ಎಸ್.ಟಿ ಸಮುದಾಯದ ಪ್ಯಾಕ್ ಲ್ಯಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು.ಈ ಮೊದಲು ಫಾರಂ 57 ಪಾಕಿರುವವರಿಗೆ ಕೂಡಲೇ ಸಾಗುವಳಿ ಚೀಟಿ ಹಾಗೂ ಹಕ್ಕುಪತ್ರ ನೀಡಬೇಕು. ಫಾರಂ.57, ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ