Breaking News

2ನೇ ಮಗು ಪಡೆದರೆ ₹25 ಸಾವಿರ ಪ್ರೋತ್ಸಾಹಧನ: ನಾಯ್ಡು

Spread the love

ಅಮರಾವತಿ: ಆಂಧ್ರಪ್ರದೇಶದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣ ಹೆಚ್ಚಿಸಲು ಎರಡನೇ ಮಗು ಪಡೆಯುವ ದಂಪತಿಗೆ ₹25 ಸಾವಿರ ‘ಜನನ ಪ್ರೋತ್ಸಾಹಧನ’ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಗುರುವಾರ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು, ‘ರಾಜ್ಯದಲ್ಲಿ ಪ್ರಸ್ತುತ ಒಟ್ಟು ಫಲವಂತಿಕೆ ದರ 1.5ರಷ್ಟಿದ್ದು, ಇದು ನಿಗದಿತ ಮಟ್ಟಕ್ಕಿಂತ ಕಡಿಮೆಯಿದೆ.

ಇದನ್ನು 2.1ಕ್ಕೆ ಏರಿಸುವುದು ಸರ್ಕಾರದ ಉದ್ದೇಶವಾಗಿದೆ’ ಎಂದು ಹೇಳಿದ್ದಾರೆ.

‘ನಾವು ಹೊಸ ವಿಧಾನವನ್ನು ಪರಿಶೀಲಿಸುತ್ತಿದ್ದೇವೆ. ಎರಡನೇ ಮಗು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯುವ ಪೋಷಕರಿಗೆ ಹೆರಿಗೆಯ ಸಮಯದಲ್ಲಿಯೇ ₹25 ಸಾವಿರ ನೀಡಲಾಗುವುದು. ಇದು ದೊಡ್ಡ ಮಟ್ಟದ ಬದಲಾವಣೆ ತರಲಿದೆ. ಇದು ಸಾಧ್ಯವಾದರೆ, ತುಂಬಾ ಉಪಯುಕ್ತವಾಗಲಿದೆ’ ಎಂದು ನಾಯ್ಡು ತಿಳಿಸಿದ್ದಾರೆ.

‘ವಯಸ್ಸಾದ ಜನರಿಂದಾಗಿ ಅನೇಕ ದೇಶಗಳು ವಿವಿಧ ಸವಾಲುಗಳನ್ನು ಎದುರಿಸುತ್ತಿವೆ. ರಾಜ್ಯ ಸರ್ಕಾರವು ಮಾರ್ಚ್‌ ಅಂತ್ಯದ ವೇಳೆಗೆ ಜನಸಂಖ್ಯಾ ನಿರ್ವಹಣೆಯ ಕುರಿತು ನೀತಿಯನ್ನು ರೂಪಿಸಿ ಏಪ್ರಿಲ್‌ನಿಂದ ಜಾರಿಗೆ ತರಲು ಚಿಂತನೆ ನಡೆಸಿದೆ’ ಎಂದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ